ಬೆಂಗಳೂರು: ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವಿಟ್ ಮಾಡುವ ಮೂಲಕ ವದಂತಿಗೆ ತೆರೆ ಎಳೆದಿದ್ದಾರೆ.
ನಾನು, ಕಾನೂನು ವಿದ್ಯಾರ್ಥಿಯಾಗಿ 1972ರಲ್ಲಿ ರಾಜಕೀಯ ಪ್ರವೇಶ ಮಾಡಿದಾಗಿಂದ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ ವ್ಯವಸ್ಥೆ ಪರ ಹೋರಾಡುತ್ತಾ ಬಂದಿದ್ದೇನೆ. ಬಿಜೆಪಿ ಈ ಎಲ್ಲಾ ತತ್ವಗಳಿಗೂ ವಿರುದ್ಧವಾಗಿದೆ. ಹೀಗಿರುವಾಗ ಬಿಜೆಪಿ ಸೇರಲು ಸಾಧ್ಯವೇ(?) ಇದೊಂದು ಮೂರ್ಖತನದ ಪ್ರಚಾರ ಎಂದು ಸಿದ್ದರಾಮಯ್ಯ ಸ್ಪಷ್ಟವಾಗಿ ತಿಳಿಸಿದ್ದಾರೆ.
ಇನ್ನು ಯಾರೇ ಆಗಲಿ ಒಂದು ಸಿದ್ಧಾಂತಕ್ಕೆ ಬದ್ಧವಾಗಿದ್ದಾಗ ಪದೇ ಪದೇ ಪಕ್ಷ ಬದಲಿಸುವಂತಹ ಸನ್ನಿವೇಶವೇ ಉದ್ಭವಿಸುವುದಿಲ್ಲ, ಅವಕಾಶವಾದಿ ರಾಜಕಾರಣಿಗಳು ಮಾತ್ರ ಅಧಿಕಾರ ಹುಡುಕಿಕೊಂಡು ಹೋಗುತ್ತಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಜನರಿಂದ ನೇರವಾಗಿ ಸಿಗಬೇಕೇ ಹೊರತು ವಾಮಮಾರ್ಗದ ಮೂಲಕ ಅಧಿಕಾರ ಪಡೆಯಲು ಹಪಹಪಿಸಬಾರದು ಎಂದು ಪಕ್ಷದಿಂದ ಪಕ್ಷಕ್ಕೆ ಜಿಗಿಯುವ ರಾಜಕೀಯ ನಾಯಕರಿಗೆ ಬಿಸಿ ಮುಟ್ಟಿಸಿದ್ದಾರೆ.
ಸದ್ಯ ಬಾದಾಮಿ ಕ್ಷೇತ್ರದಲ್ಲಿ ರೂ.500 ಕೋಟಿ ವೆಚ್ಚದ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಬೇಡಿಕೆ ಇಟ್ಟಿದ್ದೀನಿ. ಯೋಜನೆ ಇನ್ನೂ ಅನುಮೋದನೆಗೊಂಡಿಲ್ಲ, ಆಗಲೇ ಬಿಜೆಪಿಯ ಕೆಲವು ನಾಯಕರು ಬಾದಾಮಿಗೆ ನಾವು ರೂ.650 ಕೋಟಿ ಕೊಟ್ಟಿದ್ದೀವಿ ಅಂತ ಪ್ರಚಾರ ಶುರು ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ