ರಿಯಾದ್: ಸೌದಿ ಅರೇಬಿಯಾದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಅನಿರ್ದಿಷ್ಟ ಕಾಲದವರೆಗೆ ಮುಚ್ಚಲಾಗಿದ್ದು, ನಿವಾಸಿಗಳು ಮತ್ತು ಅನಿವಾಸಿಗಳು ಯುಎಇ, ಕುವೈತ್ ಮತ್ತು ಬಹ್ರೈನ್ ಸೇರಿದಂತೆ ಏಳು ದೇಶಗಳಿಗೆ ಹೋಗುವುದನ್ನು ನಿಷೇಧಿಸಲಾಗಿದೆ. ಸೌದಿ ಅರೇಬಿಯಾದಲ್ಲಿ ಈವರೆಗೆ 11ಮಂದಿಗೆ ಕರೋನ ಸೋಂಕು ತಗುಲಿರುವುದಾಗಿ ದೃಢೀಕರಿಸಲಾಗಿದೆ.
ಕೊರೋನ ಸೊಂಕು ಹರಡಿರುವ ಗುಮಾನಿ ಮೇಲೆ ಸೌದಿ ಅರೇಬಿಯಾದಲ್ಲಿ ಸುಮಾರು 300 ಜನರು ನಿರೀಕ್ಷಣೆಯಲ್ಲಿದ್ದಾರೆ. ಇದುವರೆಗಿನ ಅವರ ಫಲಿತಾಂಶಗಳು ನಕಾರಾತ್ಮಕವಾಗಿವೆ. ಸೌದಿ ಶಾಲೆಗಳಲ್ಲಿ ಯಾವುದೇ ಕರೋನ ವೈರಸ್ ಪ್ರಕರಣ ದಾಖಲಾಗಿಲ್ಲ. ಆದಾಗ್ಯೂ, ಮುಂಜಾಗ್ರತಾ ಕ್ರಮವಾಗಿ, ವಿಶ್ವವಿದ್ಯಾಲಯಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಅನಿರ್ದಿಷ್ಟಾವಧಿ ಕಾಲದವರೆಗೆ ಮುಚ್ಚಲಾಗಿದೆ. ಹಿಂದೆಯೇ ನಿಶ್ಚಯಿಸಿರುವಂತೆ ದಮ್ಮಾಂ ಭಾರತೀಯ ಶಾಲೆಯಲ್ಲಿ ಸಿಬಿಎಸ್‌ಇ ಪರೀಕ್ಷೆ ನಡೆಯಲಿದೆ. ತರಗತಿಗಳು ನಷ್ಟವಾಗುವುದನ್ನು ತಡೆಯಲು ಸಚಿವಾಲಯದ ಅಡಿಯಲ್ಲಿ ದೂರಶಿಕ್ಷಣ ತರಗತಿಗಳು ನಡೆಯಲಿವೆ. ಮಸೀದಿಗಳ ಬೋಧನಾ ತರಗತಿಗಳನ್ನು ಕೂಡ ರದ್ದುಗೊಳಿಸಲಾಗಿದೆ.
ಕರೋನದ ಹಿನ್ನೆಲೆಯಲ್ಲಿ ಸೌದಿ ಪ್ರಜೆಗಳು ಮತ್ತು ವಿದೇಶಿಯರಿಗೆ ಯುಎಇ, ಬಹ್ರೈನ್, ಕುವೈತ್, ಲೆಬನಾನ್, ಸಿರಿಯಾ, ದಕ್ಷಿಣ ಕೊರಿಯಾ, ಈಜಿಪ್ಟ್, ಇಟಲಿ ಮತ್ತು ಇರಾಕ್ ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ. ಪ್ರಯಾಣ ನಿಷೇಧಿಸಲಾದ ಏಳು ದೇಶಗಳ ಪಟ್ಟಿಯಲ್ಲಿ ಭಾರತ ಇಲ್ಲ. ಕೊರೋನ ಪತ್ತೆಯಾದ ಪೂರ್ವ ಪ್ರಾಂತ್ಯದ ಖತೀಫ್‌ಗೆ ಹೋಗುವ ಎಲ್ಲಾ ಮಾರ್ಗಗಳನ್ನು ತಡೆಯಲಾಗಿದೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ