ಹೊಸದಿಲ್ಲಿ: ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಪರಿಷ್ಕರಣೆ ಪ್ರಕ್ರಿಯೆ ವೇಳೆ ನಾಗರಿಕರಿಂದ ಯಾವುದೇ ದಾಖಲೆ ನೀಡುವಂತೆ ಒತ್ತಾಯಿಸುವುದಿಲ್ಲ. ಜತೆಗೆ ದಾಖಲೆ ಇಲ್ಲದವರನ್ನು ‘ಅನುಮಾನಾಸ್ಪದ’ ವ್ಯಕ್ತಿಗಳು ಎಂದು ಪರಿಗಣಿಸುವುದಿಲ್ಲಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.
ಹೊಸದಿಲ್ಲಿ ಹಿಂಸಾಚಾರ ಕುರಿತ ಚರ್ಚೆಗೆ ಗುರುವಾರ ರಾಜ್ಯಸಭೆಯಲ್ಲಿ ಉತ್ತರ ನೀಡಿದ ಅವರು, ಮಾಹಿತಿ ಸಂಗ್ರಹಕಾರರು ಕೇಳುವ ಪ್ರಶ್ನೆಗಳಿಗೆ ಜನರು ಉತ್ತರಿಸಿದರೆ ಸಾಕು ಎಂದು ಸ್ಪಷ್ಟಪಡಿಸಿದರು.
”ಸಿಎಎ ಮತ್ತು ಎನ್ಪಿಆರ್ ಪ್ರಕ್ರಿಯೆ ಬಗ್ಗೆ ಈಗಲೂ ಪ್ರತಿಪಕ್ಷಗಳ ನಾಯಕರಿಗೆ ಅನುಮಾನಗಳಿದ್ದಲ್ಲಿ ಸ್ಪಷ್ಟನೆಗಾಗಿ ಅವರು ಸಮಯ ಕೇಳಿದಲ್ಲಿ ವಿವರಿಸಲು ಸಿದ್ಧನಿದ್ದೇನೆ. ನನಗೆ ಸಕಾರಾತ್ಮಕ ಚರ್ಚೆ ಬೇಕು. ಅನುಮಾನಗಳು ಹಾಗೆಯೇ ಉಳಿಯಬಾರದು,” ಎಂದು ಹೇಳಿದರು.
ರಾಜ್ಯಸಭೆ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್ ಅವರ ನೇತೃತ್ವದಲ್ಲಿ ಸದಸ್ಯರು ತಮ್ಮನ್ನು ಭೇಟಿಯಾದರೆ ಖಂಡಿತವಾಗಿ ಸಮಯ ಮಾಡಿಕೊಂಡು ಸಿಎಎ ಮತ್ತು ಎನ್ಪಿಆರ್ಗೆ ಬಗ್ಗೆ ವಿವರಿಸುವೆ ಎಂದು ಕೂಡ ಶಾ ಆಹ್ವಾನ ನೀಡಿದರು. ಇದೇ ವೇಳೆ, ”ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ)ಯಲ್ಲಿ ಈ ದೇಶದ ಮುಸ್ಲಿಮರ ಪೌರತ್ವ ಕಿತ್ತುಕೊಳ್ಳುವ ಒಂದೇ ಒಂದು ಉಲ್ಲೇಖವಿದ್ದರೆ ತಿಳಿಸಿ’ ಎಂದು ಸವಾಲು ಹಾಕಿದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ