ಬೆಂಗಳೂರು ,ಮಾ.15: ರಾಜ್ಯಾದ್ಯಂತ ಕೊರೋನಾ ವೈರಸ್ ಭೀತಿ ಹೆಚ್ಚಾಗಿರುವುದರಿಂದ 7, 8 ಮತ್ತು 9ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದೆ.
ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಣೆ ಹೊರಡಿಸಿದ್ದಾರೆ. ಸೋಮವಾರದಿಂದ ಆರಂಭವಾಗಬೇಕಾಗಿದ್ದ 7ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಹಾಗೇ 8 ಮತ್ತು 9ನೇ ತರಗತಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಮಾರ್ಚ್ 31ರವರೆಗೆ ಯಾವುದೇ ಪರೀಕ್ಷೆಗಳನ್ನು ನಡೆಸುವುದು ಬೇಡ ಎಂದು ಎಲ್ಲ ಶಾಲೆಗಳಿಗೆ ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಮುಂದಿನ ಪರೀಕ್ಷೆಯ ಹೊಸ ದಿನಾಂಕವನ್ನು ಇನ್ನೂ ಘೋಷಣೆ ಮಾಡಿಲ್ಲ. ಕರ್ನಾಟಕದಲ್ಲಿ ಕೊರೋನಾ ವೈರಸ್ ಪ್ರಕರಣಗಳನ್ನು ನೋಡಿಕೊಂಡು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಮುಂದಿನ ಪರೀಕ್ಷಾ ದಿನಾಂಕವನ್ನು ನಿಗದಿ ಮಾಡುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ಪರೀಕ್ಷೆಯ ಹೊಸ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಘೋಷಿಸಲಾಗುವುದು.
ಆದರೆ 10ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಿಗದಿಯಂತೆ ಮಾರ್ಚ್ 27ರಿಂದ ಏಪ್ರಿಲ್ 9ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಆಯಾ ದಿನಗಳಂದು ಮಾತ್ರ ವಿದ್ಯಾರ್ಥಿಗಳು ಹಾಜರಾಗುವಂತೆ ಹೇಳಲಾಗಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ