ರಿಯಾದ್,ಮಾ.16: ಕೋವಿಡ್ 19 ಹರಡುವುದನ್ನು ತಡೆಯಲು ಸೌದಿ ಅರೇಬಿಯಾದ ಎಲ್ಲಾ ಶಾಪಿಂಗ್ ಮತ್ತು ವಾಣಿಜ್ಯ ಮಾಲ್‌ಗಳನ್ನು ಮುಚ್ಚುವಂತೆ ಅಲ್ಲಿನ ಆರೋಗ್ಯ ಸಚಿವಾಲಯ ಆದೇಶ ನೀಡಿದೆ. ಆದೇಶವು ಇಂದಿನಿಂದ ಜಾರಿಗೆ ಬಂದಿದೆ.
ಮಾಲ್‌ಗಳಲ್ಲಿನ ವೈದ್ಯಕೀಯ ಅಂಗಡಿಗಳು ಮತ್ತು ಸೂಪರ್‌ಮಾರ್ಕೆಟ್‌ಗಳಿಗೆ ಈ ನಿಯಂತ್ರಣ ಅನ್ವಯಿಸುವುದಿಲ್ಲ. ಜನರು ಒಟ್ಟಾಗಿ ಸೇರುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕಡಲತೀರಗಳು ಮತ್ತು ಉದ್ಯಾನವನಗಳಲ್ಲಿ ಜನರು ಸೇರುವುದನ್ನು ನಿಷೇಧಿಸಲಾಗಿದೆ. ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ತಿನ್ನುವುದನ್ನು ಸಹ ನಿಷೇಧಿಸಲಾಗಿದೆ. ಇಂದಿನಿಂದ ಪಾರ್ಸೆಲ್ ಮಾತ್ರ ಅನುಮತಿಸಲಾಗಿದೆ. ಮತ್ತು ಇಪ್ಪತ್ನಾಲ್ಕು ಗಂಟೆಗಳ ಕಾಲ ಕೆಲಸ ಮಾಡಲು ಅನುಮತಿ ನೀಡಲಾಗಿದೆ. ದೇಶದಲ್ಲಿ ಅಗತ್ಯ ಸರಕುಗಳು ಲಭ್ಯವಿವೆ ಮತ್ತು ಸೌದಿ ಅರೇಬಿಯಾಕ್ಕೆ ಸರಕು ಸಾಗಣೆಗೆ ಯಾವುದೇ ನಿಷೇಧವಿಲ್ಲ ಎಂದು ಸೌದಿ ಪಬ್ಲಿಕ್ ಪ್ರಾಸಿಕ್ಯೂಷನ್ ತಿಳಿಸಿದೆ.