ಬೆಂಗಳೂರು :ಮಂಗಳೂರಲ್ಲಿ ಮೊದಲ ಕರೋನ ಕೇಸ್ ದೃಢಪಟ್ಟಿದ್ದು ದುಬೈನಿಂದ ಆಗಮಿಸಿದ್ದ ವ್ಯಕ್ತಿಗೆ ಕೋರೋಣ ವೈರಸ್ ಸೋಂಕು ಇರುವುದು ದೃಢಪಟ್ಟಿದೆ.
ಮಾರ್ಚ್ 19, 2020ರಂದು 165 ಪ್ರಯಾಣಿಕರೊಂದಿಗೆ ಸ್ಪೈಸ್ ಜೆಟ್ ವಿಮಾನದ ಮೂಲಕ, ಭಟ್ಕಳಕ್ಕೆ ಮಂಗಳೂರು ಮೂಲಕ ಆಗಮಿಸಿದ್ದನು. ಈ ಯುವಕನನ್ನು ಶಂಕೆಯ ಹಿನ್ನಲೆಯಲ್ಲಿ ನಗರ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಯುವಕನಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢ ಪಟ್ಟಿದೆ.
ರಾಜ್ಯದಲ್ಲಿ ಮೂರನೇ ವಾರದಲ್ಲಿ ತೀವ್ರ ಗತಿಯಲ್ಲಿ ಕರೋನಾ ಹರಡುತ್ತಿದ್ದು ನಿನ್ನೆಂದೀಚೆಗೆ ಹಲವು ಮಂದಿಗೆ ಸೋಂಕು ತಗಲಿದೆ. ಇಂದು ಮತ್ತೆ 6 ಪ್ರಕರಣ ಬೆಳಕಿಗೆ ಬಂದಿದ್ದು ರಾಜ್ಯದಲ್ಲಿ ಈವರೆಗೆ ಒಟ್ಟು 26 ಜನರಿಗೆ ಸೋಂಕು ತಗುಲಿದಂತಾಗಿದೆ.
ಮಾರಕ ಕೊರೋನಾ ವೈರಸ್ ಧಾರಾವಾಡಕ್ಕೂ ಕಾಲಿಟ್ಟಿದ್ದು ವ್ಯಕ್ತಿಯೊಬ್ಬನಲ್ಲಿ ಕೊರೊನಾ ಸೋಂಕು ಧೃಡಪಟ್ಟಿದೆ. ಹುಬ್ಬಳ್ಳಿ-ಧಾರವಾಡ ಮೂಲದ ವ್ಯಕ್ತಿಯೊಬ್ಬ ದುಬೈನಿಂದ ಹುಬ್ಬಳ್ಳಿಗೆ ಬಂದಿದ್ದಾನೆ ಎನ್ನಲಾಗಿದೆ. ಸ್ವಯಂ ಪ್ರೇರಿತವಾಗಿ ಆ ವ್ಯಕ್ತಿ ಖಾಸಗಿ ಆಸ್ಪತ್ರೆಗೆ ದಾಖಲು ಆಗಿದ್ದಾನೆ.
ಆದರೆ ಈ ವೇಳೆ ಖಾಸಗಿ ಆಸ್ಪತ್ರೆ ವೈದ್ಯರು ಕೂಡಲೇ ಆ ವ್ಯಕ್ತಿಯ ರಕ್ತದ ಮಾದರಿಯನ್ನು ಶಿವಮೊಗಕ್ಕೆ ಕಳುಹಿಕೊಟ್ಟಿದ್ದರು, ಇಂದು ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಈ ವೇಳೇ ಜಿಲ್ಲಾಡಳಿತ ಕೂಡಲೇ ಆತನನ್ನು ಹುಬ್ಬಳ್ಳಿಯಿಂದ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ