ಜಿದ್ದಾ, ಮಾ.29: ಸೌದಿ ಅರೇಬಿಯಾದಲ್ಲಿ ಕೋವಿಡ್-19 ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಜಾರಿಗೊಳಿಸಲಾಗಿರುವ ಕರ್ಫ್ಯೂ, ಪ್ರಮುಖ ನಗರಗಳಾದ ರಿಯಾದ್, ಮಕ್ಕಾ ಮತ್ತು ಮದೀನಾದಲ್ಲಿ ವಿಸ್ತರಿಸಿದ ಸಮಯವನ್ನು ಜಿದ್ದಾ ನಗರದಲ್ಲೂ ಜಾರಿಗೆ ತರಲಾಗಿದೆ.
ಈ ಹಿಂದೆ ಸಂಜೆ 7 ರಿಂದ ಬೆಳಿಗ್ಗೆ 6 ರವರೆಗೆ ಇದ್ದ ಕರ್ಫ್ಯೂ ಮಧ್ಯಾಹ್ನ 3 ಗಂಟೆ ಯಿಂದಲೇ ಆರಂಭಗೊಳ್ಳಲಿದೆ. ಮಧ್ಯಾಹ್ನ 3 ಗಂಟೆಯಿಂದ ಮರುದಿನ ಬೆಳಿಗ್ಗೆ 6 ಗಂಟೆ ವರೆಗೆ ಯಾರೂ ನಗರವನ್ನು ಪ್ರವೇಶಿಸಲು ಅಥವಾ ನಿರ್ಗಮಿಸಲು ಸಾಧ್ಯವಿಲ್ಲ. ಕರ್ಫ್ಯೂಗಳ ಮೇಲಿನ ವಿನಾಯ್ತಿಗಳು ಹಿಂದಿನಂತೆ ಇರಲಿದೆ.
ಏತನ್ಮಧ್ಯೆ ಮದೀನಾ ನಗರ ಪರಿಸರದ 6 ಜಿಲ್ಲೆಗಳಾದ ಕುರ್ಬಾನ್, ಬನಿ ಝುಫರ್, ಶೂರೈಬಾತ್, ಜುಮುಆ ಬನೀಕುದ್ರಾ ಮತ್ತು ಇಸ್ಕಾನ್ನ ಕೆಲವು ಭಾಗಗಳಲ್ಲಿ ದಿನದ 24 ಗಂಟೆಗಳ ಕರ್ಫ್ಯೂ ಘೋಷಿಸಲಾಗಿದೆ.ಇದು ಅಲ್ಲಿನ ನಿವಾಸಿಗಳನ್ನು ತಮ್ಮ ಮನೆಗಳಲ್ಲಿ ನಿರೀಕ್ಷಣೆಯಲ್ಲಿರಿಸಿ ಕೊರೋನಾ ಇಲ್ಲವೆಂದು ದೃಢೀಕರಿಸುವ ಭಾಗವಾಗಿದೆ. 14 ದಿನ ಕರ್ಫ್ಯೂ ಮುಂದುವರಿಯಲಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು