ಕೊಚ್ಚಿ: ಭಾರತದಲ್ಲಿ ಲಾಕ್‌ಡೌನ್ ಮುಂದುವರಿದಿರುವ ಕಾರಣ,ಭಾರತ ಅನುಮತಿ ನಿರಾಕರಿಸಿದ್ದು,ಸಧ್ಯ ಎಮಿರೇಟ್ಸ್ ಏರ್ ಲೈನ್ಸ್ ವಿಮಾನಯಾನವನ್ನು ಪ್ರಾರಂಭಿಸುವುದಿಲ್ಲ ಎನ್ನಲಾಗಿದೆ.
ಈ ಹಿಂದೆ ಏಪ್ರಿಲ್ 6 ರಿಂದ ಎಮಿರೇಟ್ಸ್ ಭಾರತಕ್ಕೆ ವಿಮಾನಯಾನ ಆರಂಭಿಸಲಿದೆ ಎಂಬ ವರದಿಗಳು ಬಂದಿದ್ದವು. ಆದರೆ, ಎಮಿರೇಟ್ಸ್ ಬಿಡುಗಡೆ ಮಾಡಿದ ದೇಶಗಳ ಪಟ್ಟಿಯಲ್ಲಿ ಭಾರತ ಇಲ್ಲ. ದುಬೈನಿಂದ ಲಂಡನ್, ಪ್ಯಾರಿಸ್, ಬ್ರಸೆಲ್ಸ್ ಮತ್ತು ಜುರಿಚ್‌ಗೆ ಎ.6ರಂದು ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಎಮಿರೇಟ್ಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಸೋಮವಾರ ನೆಡುಂಬಾಶ್ಸೇರಿ ಮತ್ತು ತಿರುವನಂತಪುರಂ ಸೇರಿದಂತೆ ಭಾರತದ ಏಳು ನಗರಗಳಿಗೆ ಸೇವೆಯನ್ನು ಪ್ರಾರಂಭಿಸುವ ಬಗ್ಗೆ ತಿಳಸಲಾಗಿದ್ದು, ವಿಮಾನಗಳ ವೇಳಾಪಟ್ಟಿಯನ್ನು ಕೂಡ ಬಿಡುಗಡೆ ಗೊಳಿಸಿದ್ದವು. ಆದಾಗ್ಯೂ, ಎಮಿರೇಟ್ಸ್ ಅಧಿಕಾರಿಗಳು ಇದನ್ನು ಅಧಿಕೃತವಾಗಿ ದೃಢೀಕರಿಸಿರಲಿಲ್ಲ ಮತ್ತು ಆಯಾಯ ದೇಶಗಳ ಅನುಮತಿಯೊಂದಿಗೆ ಮಾತ್ರ ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಲಾಗಿತ್ತು.
ಅನುಮೋದನೆ ಪಡೆದ ದೇಶಗಳಲ್ಲಿ ಪ್ರಸಕ್ತ ಸೇವೆಗಳನ್ನು ಪ್ರಾರಂಭಿಸಲಾಗುತ್ತಿದೆ. ಹೆಚ್ಚಿನ ದೇಶಗಳ ಅನುಮತಿಯೊಂದಿಗೆ ಸೇವೆಗಳನ್ನು ವಿಸ್ತರಿಸಲಾಗುವುದು. ಆ ದೇಶಗಳಿಗೆ ತುರ್ತು ಪ್ರವೇಶವನ್ನು ಹೊಂದಬೇಕಾದ ಅನುಮತಿ ಪತ್ರ ಇರುವವರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ