ಕುವೈತ್ ಸಿಟಿ: ಕುವೈತ್‌ನಲ್ಲಿ ಕೊರೋನ ಸೋಂಕಿನಿಂದ ಬಳಲುತ್ತಿರುವ ಭಾರತೀಯರ ಸಂಖ್ಯೆ ಹೆಚ್ಚುತ್ತಿದೆ.ಹೊಸತಾಗಿ 79 ಭಾರತೀಯರು ಸೇರಿದಂತೆ 112 ಜನರಿಗೆ ಕೊರೋನ ಕಾಯಿಲೆ ಇರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್‌ಗೆ ಒಳಗಾದವರ ಸಂಖ್ಯೆ 855 ತಲುಪಿದೆ. ಆ ಪೈಕಿ 442 ಮಂದಿ ಭಾರತೀಯರು.
ಕ್ಯಾರೆಂಟೈನ್‌ನಲ್ಲಿದ್ದ 111 ರೋಗಿಗಳು ಗುಣಮುಖರಾಗಿದ್ದಾರೆ. ಒಟ್ಟು 743 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, 21 ಮಂದಿ ತೀವ್ರ ನಿಗಾದಲ್ಲಿದ್ದಾರೆ. ಏತನ್ಮಧ್ಯೆ, ಇಂದು 6 ಜನರು ರೋಗದಿಂದ ಮುಕ್ತರಾಗಿದ್ದಾರೆ. ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳುವಂತೆ ಅವರಿಗೆ ಸೂಚನೆ ನೀಡಲಾಗಿದೆ ಎಂದು ವಿದೇಶಾಂಗ ಖಾತೆ ರಾಜ್ಯ ಸಚಿವ ಡಾ.ಬಾಸಿಲ್ ಅಲ್ ಸಬಾಹ್ ಹೇಳಿದ್ದಾರೆ.
ಏತನ್ಮಧ್ಯೆ, ಸರಕಾರಿ ಆಸ್ಪತ್ರೆಗಳಲ್ಲಿನ ದಾದಿಯರು ಮತ್ತು ಆರೋಗ್ಯ ಕಾರ್ಯಕರ್ತರನ್ನು ಸಾರ್ವಜನಿಕ ಆಸ್ಪತ್ರೆಗಳ ಸಮೀಪವಿರುವ ಶಾಲೆಗಳಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ. ಲೋಕೋಪಯೋಗಿ ಸಚಿವಾಲಯ, ಶಿಕ್ಷಣ ಸಚಿವಾಲಯ ಮತ್ತು ಇತರ ಇಲಾಖೆಗಳೊಂದಿಗೆ ಯುದ್ಧ ಕಾಲದ ಆಧಾರದ ಮೇಲೆ ವಸತಿ ಒದಗಿಸಲಾಗುವುದು.
ಕೋವಿಡ್ ರೋಗಿಗಳೊಂದಿಗೆ ಸಂವಹನ ನಡೆಸುವ ಆರೋಗ್ಯ ಕಾರ್ಯಕರ್ತರು ವಸತಿ ಪ್ರದೇಶಗಳಲ್ಲಿ ಇತರ ಜನರೊಂದಿಗೆ ಉಳಿದುಕೊಳ್ಳುವುದರಿಂದ ಕೋವಿಡ್ ವ್ಯಾಪಕಗೊಳ್ಳುವ ಸಾಧ್ಯತೆಯಿದೆ ಎಂಬ ಕಾರಣಕ್ಕೆ ಈ ನಡೆ ಎನ್ನಲಾಗಿದೆ. ಆರೋಗ್ಯ ವೃತ್ತಿಪರರಲ್ಲಿ ಹೆಚ್ಚಿನವರು ಕೇರಳ ಮೂಲದವರಾಗಿದ್ದಾರೆ. ಕುಟುಂಬದಿಂದ ದೂರವಿದ್ದು ಎಷ್ಟು ದಿನ ಎಂಬ ಆತಂಕವೂ ಅವರನ್ನು ಕಾಡುತ್ತಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ