ಅನಿವಾಸಿ ಭಾರತೀಯರಿಂದಲೇ ಪ್ರಾರಂಭಗೊಂಡು ಧಾರ್ಮಿಕ, ಸಾಮಾಜಿಕ, ಮತ್ತು ಶೈಕ್ಷಣಿಕ ರಂಗಗಳಲ್ಲಿ ಉತ್ತಮ ರೀತಿಯಲ್ಲಿ ಸೇವೆ ಗೈಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾ ಸಂಸ್ಥೆ ಎ.ಎಮ್.ಇ.ಸಿ. ಯನ್ನು ಪ್ರವಾಸಿಗಳಿಗೆ ಅಗತ್ಯವಾದರೆ ಕ್ವಾರಂಟೈನ್ ಆಗಿ ನೀಡಲು ಸಿದ್ಧ ಎಂದು ಸಂಸ್ಥೆಯ ಉಪಾಧ್ಯಕ್ಷರಾದ ಸ್ವಲಾಹುದ್ದೀನ್ ಸಖಾಫಿ ಮಾಡನ್ನೂರ್ ಹಾಗೂ ಎ.ಎಮ್.ಇ.ಸಿ ಇದರ ಜನರಲ್ ಮ್ಯಾನೇಜರ್ ಅಶ್ರಫ್ ಸಖಾಫಿ ಮಾಡಾವು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಜೀವನೋಪಾಯಕ್ಕಾಗಿ ವಿದೇಶದಲ್ಲಿರುವ ನೂರಾರು ಕನ್ನಡಿಗರು ಕೋರೋನ ಭೀತಿಯಿಂದ ಸಂಕಷ್ಟದಲ್ಲಿದ್ದಾರೆ. ಹಲವು ದೇಶಗಳಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅವರ ಸುರಕ್ಷತೆಯನ್ನು ಸರಕಾರವು ಖಚಿತಪಡಿಸಬೇಕೆಂದು ಸಂಸ್ಥೆಯ ಜನರಲ್ ಮ್ಯಾನೇಜರ್ ಅಶ್ರಫ್ ಸಖಾಫಿ ಮಾಡಾವು ಆಗ್ರಹಿಸಿದರು.
2006 ರಲ್ಲಿ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮೂಡಡ್ಕ ಎಂಬ ಕುಗ್ರಾಮದಲ್ಲಿ ಮರ್ಹೂಂ ಟಿ.ಎಚ್ .ಉಸ್ತಾದರು ಸ್ಥಾಪಿಸಿದ ಸಂಸ್ಥೆಯು ಇಂದು ಒಂದೇ ಸೂರಿನಡಿಯಲ್ಲಿ ಧಾರ್ಮಿಕ, ಲೌಕಿಕ ಶಿಕ್ಷಣಗಳೆರಡನ್ನೂ ನೀಡಿ ಸಮಾಜಕ್ಕೆ ಅವರನ್ನು ಉತ್ತಮ ಉತ್ಪನ್ನಗಳಾಗಿ ನೀಡುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸಿಕೊಂಡು ಬರುತ್ತಿದೆ.
ವರದಿ – ಆಸಿಫ್ ಸರಳಿಕಟ್ಟೆ















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ