ಕುವೈಟ್ ಸಿಟಿ: ಕುವೈತ್ನ ಕೋವಿಡ್ ಹಾಟ್ಸ್ಪಾಟ್ಗಳಾದ ಜಲೀಬ್ ಅಲ್ ಶುಯೂಕ್ ಮತ್ತು ಮೆಹಬೂಲಾದಲ್ಲಿ ಫೀಲ್ಡ್ ಆಸ್ಪತ್ರೆ ಸ್ಥಾಪಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಕುವೈತ್ ನ್ಯಾಷನಲ್ ಗಾರ್ಡ್ ವಿದೇಶಿಯರಿಗಾಗಿ ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸುತ್ತಿದೆ.
ಮಹಬೂಲಾದಲ್ಲಿ ನ್ಯಾಷನಲ್ ಗಾರ್ಡ್ ಸ್ಥಾಪಿಸಿದ ತಾತ್ಕಾಲಿಕ ಪಾಲಿಕ್ಲಿನಿಕ್ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಲಾಕ್ಡೌನ್ ಜಾರಿಯಲ್ಲಿರುವ ಮೆಹಬೂಲಾದ ಭಾರತೀಯರು ಸೇರಿದಂತೆ ಅನಿವಾಸಿಗಳಿಗೆ ಈ ಸುದ್ದಿ ಸಮಾಧಾನಕರವಾಗಿದೆ.
ಜಲೀಬ್ನ ಮೂರು ಶಾಲೆಗಳನ್ನು ತಾತ್ಕಾಲಿಕ ಆಸ್ಪತ್ರೆಗಳಾಗಿ ಪರಿವರ್ತಿಸುವ ಪ್ರಕ್ರಿಯೆ ಪೂರ್ಣಗೊಳ್ಳುವ ಹಂತದಲ್ಲಿದೆ. ನ್ಯಾಷನಲ್ ಗಾರ್ಡ್ ವತಿಯಿಂದ ಮಿಶ್ರಿಫ್ ಫೇರ್ಗ್ರೌಂಡ್ಸ್ನಲ್ಲಿ ವಿದೇಶಿಯರ ಚಿಕಿತ್ಸೆಗಾಗಿ ತಾತ್ಕಾಲಿಕ ಆಸ್ಪತ್ರೆಯನ್ನು ಸ್ಥಾಪಿಸಿತ್ತು. ಕೋವಿಡ್ ತಡೆಗಟ್ಟುವ ಕ್ರಮಗಳ ಭಾಗವಾಗಿ ಫೀಲ್ಡ್ ಆಸ್ಪತ್ರೆಗಳನ್ನು ಸ್ಥಾಪಿಸಲು ರಕ್ಷಣಾ ಸಚಿವಾಲಯವನ್ನು ಕ್ಯಾಬಿನೆಟ್ ನಿಯೋಜಿಸಿದೆ. ಈ ಆಸ್ಪತ್ರೆಗಳಲ್ಲಿ ಭಾರತದಿಂದ ಬಂದ ಕ್ಷಿಪ್ರ ಪ್ರತಿಕ್ರಿಯೆ ತಂಡದ ಸೇವೆಗಳು ಲಭ್ಯವಾಗುವ ಸೂಚನೆ ಇದೆ ಎಂದು ವರದಿಯಾಗಿದೆ.















ಇನ್ನಷ್ಟು ಸುದ್ದಿಗಳು
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ