ರಿಯಾದ್: ಭಾರತೀಯರೆಡೆಯಲ್ಲಿ ಕೋವಿಡ್ ತಡೆಗಟ್ಟುವ ಕ್ರಮವನ್ನು ಇನ್ನಷ್ಟು ಶಕ್ತಗೊಳಿಸಲು ಭಾರತದ ರಾಯಭಾರಿ ಕಚೇರಿಯು ಮುಂದಾಗುತ್ತಿದೆ. ಪ್ರಸಕ್ತ ರಾಯಭಾರ ಕಚೇರಿಯಡಿಯಲ್ಲಿರುವ ಸಹಾಯವಾಣಿ ಮತ್ತು ಸಾಮಾಜಿಕ ಸಂವಹನವನ್ನು ಬಲಪಡಿಸಲು ಸಹ ಯೋಜಿಸುತ್ತಿದೆ.
ಇದರ ಭಾಗವಾಗಿ ರಾಯಭಾರ ಕಚೇರಿಯು ಸಮುದಾಯಿಕ ಸಂಘಟನಾ ಮುಖಂಡರ ಸಭೆ ಕರೆದಿತ್ತು. ಸೌದಿ ಅರೇಬಿಯಾದ ವಿವಿಧ ಭಾಗಗಳ ವಿವಿಧ ಸಂಘಟನೆಗಳ ಸ್ವಯಂ ಸೇವಕರು ಮತ್ತು ಸಂಘಟನಾ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.
ಸೌದಿ ಅರೇಬಿಯಾದ ಅನೇಕ ಭಾರತೀಯ ವಲಸಿಗರು ಸಂದಿಗ್ಧತೆಯ ಹಿನ್ನೆಲೆಯಲ್ಲಿ ಸ್ವದೇಶಕ್ಕೆ ತೆರಳಲು ಬಯಸಿದ್ದಾರೆ.ಮಾನವೀಯ ನೆಲೆಯಲ್ಲಿ ರಾಯಭಾರ ಕಚೇರಿಯ ಮಧ್ಯಸ್ಥಿಕೆ ಕುರಿತು ವಿವಿಧ ಸಂಘಟನೆಯ ಮುಖಂಡರು, ಸಂಸದರು ಮತ್ತು ಮಂತ್ರಿಗಳು ಮಾಧ್ಯಮಗಳ ಚರ್ಚೆಯಲ್ಲಿ ಕರೆ ನೀಡಿದ್ದರು. ಈ ನಿಟ್ಟಿನಲ್ಲಿ ಸಭೆ ಕರೆಯಲಾಗಿತ್ತು.
ಸೌದಿ ಅರೇಬಿಯಾದಲ್ಲಿ, 30 ಲಕ್ಷಕ್ಕೂ ಹೆಚ್ಚು ಭಾರತೀಯರಿದ್ದು, ಸಹಾಯವಾಣಿಗಾಗಿ ರಾಯಭಾರ ಕಚೇರಿಯಲ್ಲಿ ಕೇವಲ ಒಂದು ಫೋನ್ ಸಂಖ್ಯೆಯನ್ನು ಮಾತ್ರ ಒದಗಿಸಲಾಗಿದೆ. ಅದನ್ನು ವಿಸ್ತರಿಸಲು ಮತ್ತು ಅದಕ್ಕಾಗಿ ಓರ್ವರನ್ನು ನೇಮಕ ಮಾಡುವಂತೆ ಆಗ್ರಹಿಸಲಾಯಿತು.ಜಿದ್ದಾ ಕಾನ್ಸುಲೇಟ್ನಲ್ಲಿ, ಇದಕ್ಕಿಂತ ಉತ್ತಮ ವ್ಯವಸ್ಥೆ ಇದೆ.ಊರಿನ ವಿವಿಧ ಸಂಸ್ಥೆಗಳು ಮತ್ತು ಸ್ಥಳೀಯ ಪ್ರತಿನಿಧಿಗಳಿಂ ಕೇಂದ್ರ ಸಚಿವರ ಮೇಲೆ ಒತ್ತಡಗಳು ಏರುತ್ತಿರುವ ಹಿನ್ನೆಲೆಯಲ್ಲಿ ಸೇವೆಯನ್ನು ವಿಸ್ತರಿಸಲು ಪ್ರಯತ್ನಗಳು ನಡೆಯುತ್ತಿವೆ.
ತುರ್ತು ವಾಪಸಾತಿ ಸಿದ್ಧತೆ, ರಾಯಭಾರ ಕಚೇರಿಯಡಿಯಲ್ಲಿ ವೈದ್ಯಕೀಯ ವಿಭಾಗಗಳನ್ನು ಸ್ಥಾಪಿಸುವುದು, ಕಾರ್ಮಿಕ ಶಿಬಿರಗಳಲ್ಲಿ ಇರುವವರ ಬಗ್ಗೆ ಗಮನಹರಿಸುವುದು, ರಾಯಭಾರ ಕಚೇರಿಯಡಿಯಲ್ಲಿ ಆಂಬ್ಯುಲೆನ್ಸ್ ಸೇವೆಗಳನ್ನು ಸ್ಥಾಪಿಸುವುದು ಮತ್ತು ಕೋವಿಡ್ ರೋಗಿಗಳ ಊಟೋಪಚಾರಕ್ಕೆ ಬೇಕಾದಲ್ಲಿ ಪಾಸ್ಗಳನ್ನು ಒದಗಿಸುವುದು ಇತ್ಯಾದಿ ವಿವಿಧ ಬೇಡಿಕೆಗಳನ್ನು ಸಭೆಯಲ್ಲಿ ಮುಂದಿಡಲಾಗಿದೆ.
ಸಲಹೆಗಳ ಕುರಿತು ರಾಯಭಾರ ಕಚೇರಿಯು ಸೌದಿ ಸರಕಾರದೊಂದಿಗೆ ಸಮಾಲೋಚಿಸಿ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ. ರಾಯಭಾರಿಯ ಸಾರಥ್ಯದಲ್ಲಿ ನಡೆದ ಸಭೆಯಲ್ಲಿ ಜಿದ್ದಾ ಕಾನ್ಸುಲ್ ಜನರಲ್ ಮತ್ತು ಸುಮಾರು 30 ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ