ಬೆಂಗಳೂರು, ಏ.17- ಲಾಕ್‍ಡೌನ್ ಹಿನ್ನೆಲೆಯಲ್ಲಿ ಏ.20ರಿಂದ ಓಡಾಟಕ್ಕೆ ಪಾಸ್ ಅವಶ್ಯಕತೆ ಇರುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದ್ದಾರೆ.
ಐಟಿ, ಬಿಟಿ ಉದ್ದಿಮೆಗಳ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಯಥಾ ಪ್ರಕಾರ ಇರುತ್ತದೆ. ಇದು ಎಷ್ಟು ದಿನ ಅನ್ನೋದು ಗೊತ್ತಿಲ್ಲ. ಹೀಗಾಗಿ ನಮ್ಮ ಎಚ್ಚರಿಕೆಯಲ್ಲಿ ನಾವು ಕೆಲಸ ಕಾರ್ಯ ಆರಂಭಿಸಬೇಕಿದೆ ಎಂದು ಹೇಳಿದ್ದಾರೆ.
ಐಟಿ ನೌಕರರ ಓಡಾಟಕ್ಕೆ ಪಾಸ್ ಅಗತ್ಯ ಉದ್ಭವ ಆಗೋದಿಲ್ಲ. ಶೇ.50ರಷ್ಟು ಐಟಿ ನೌಕರರು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಲಾಗಿದೆ. ಕಂಪನಿಗಳಲ್ಲಿ ಥರ್ಮಲ್ ಟೆಸ್ಟಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು. ಸ್ಯಾನಿಟೈಸರ್ ಮಾಡಿದ ಬಿಎಂಟಿಸಿಗಳನ್ನು ಐಟಿ ಕಂಪನಿಗೆ ನೀಡುತ್ತೇವೆ. ಐಟಿ ಕಂಪನಿ ಬಸ್ ವ್ಯವಸ್ಥೆ ಕೇಳಿದ್ರೆ ಮಾತ್ರ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.
ತ್ವರಿತ ಪರಿಕ್ಷಾ ಕಿಟ್ ಚೀನಾದಿಂದ ಬರಬೇಕಿದೆ. ಎರಡು ಲಕ್ಷ ಕಿಟ್ ಆರ್ಡರ್ ಮಾಡಿದ್ದೇವೆ. ಈ ತಿಂಗಳ ಅಂತ್ಯಕ್ಕೆ ಒಂದಿಷ್ಟು ಕಿಟ್ ಬರಲಿದೆ. ಬಳಿಕ ಬಾಕಿ ಉಳಿದ ಕಿಟ್ ಬರುತ್ತವೆ ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ