ರಿಯಾದ್: ಸೌದಿ ಅರೇಬಿಯಾದ ಎಲ್ಲ ವ್ಯಾಪಾರ ಕೇಂದ್ರಗಳಲ್ಲಿ ಇ-ಪಾವತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ. ಆಗಸ್ಟ್ ಅಂತ್ಯದ ಮೊದಲು ಎಲ್ಲಾ ಕೇಂದ್ರಗಳಲ್ಲಿ ಇ-ಪಾವತಿ ವ್ಯವಸ್ಥೆಯನ್ನು ಸ್ಥಾಪಿಸಬೇಕು. ಉಲ್ಲಂಘನೆ ಕಂಡುಬಂದರೆ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಾಣಿಜ್ಯ ಸಚಿವಾಲಯ ಹೇಳಿದೆ.
ಇ-ಪಾವತಿ ವ್ಯವಸ್ಥೆಯನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸುವ ಬಗ್ಗೆ ದೇಶದ ಎಲ್ಲ ವ್ಯಾಪಾರ ಸಂಸ್ಥೆಗಳಲ್ಲಿ ಈಗಾಗಲೇ ಯೋಜನೆ ರೂಪಿಸಲಾಗಿದೆ. ಯೋಜನೆಯ ಮೊದಲ ಹಂತವನ್ನು ಈ ವರ್ಷದ ಜುಲೈನಲ್ಲಿ ಇಂಧನ ಕೇಂದ್ರಗಳು ಮತ್ತು ಸಂಬಂಧಿತ ಸೇವಾ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿತ್ತು. ಈ ವರ್ಷದ ನವೆಂಬರ್ನಿಂದ, ಪಂಚರ್ ಅಂಗಡಿಗಳು, ಬಿಡಿಭಾಗಗಳ ಅಂಗಡಿಗಳು ಮತ್ತು ವರ್ಕ್ ಶಾಪ್ಗಳು ಸೇರಿದಂತೆ ಎಲ್ಲಾ ವಾಹನ ಸಂಬಂಧಿತ ಸಂಸ್ಥೆಗಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗಿದೆ.
ಮುಂದಿನ ಆಗಸ್ಟ್ ವೇಳೆಗೆ ದೇಶದ ಎಲ್ಲಾ ವ್ಯಾಪಾರ ಸಂಸ್ಥೆಗಳಿಗೆ ಎಲೆಕ್ಟ್ರಾನಿಕ್ ಪಾವತಿ ವ್ಯವಸ್ಥೆ ಕಡ್ಡಾಯ ಎಂದು ವಾಣಿಜ್ಯ ಸಚಿವಾಲಯ ಪ್ರಕಟಿಸಿದೆ. ಹಾಗೆ ಮಾಡಲು ವಿಫಲರಾದವರಿಗೆ ದಂಡ ವಿಧಿಸಲಾಗುತ್ತದೆ. ಪುನರಾವರ್ತಿಸಿದರೆ, ಸಂಸ್ಥೆಗಳನ್ನು ಮುಚ್ಚಲಾಗುತ್ತದೆ ಎಂದು ಸಚಿವಾಲಯ ಹೇಳಿದೆ.
ಈ ಯೋಜನೆಯನ್ನು ದೇಶದ ಎಲ್ಲಾ ಚಿಲ್ಲರೆ ಮಾರಾಟ ಮಳಿಗೆಗಳಿಗೂ ವಿಸ್ತರಿಸುವುದಾಗಿ ಭಯೋತ್ಪಾದನಾ ವಿರೋಧಿ ಕಾರ್ಯಕ್ರಮದ ಭಾಗವಾಗಿ ಈ ಹಿಂದೆ ಘೋಷಿಸಲಾಗಿತ್ತು. ದೇಶದಲ್ಲಿ ಕರೆನ್ಸಿ ರಹಿತ ವಹಿವಾಟಿನ ಪ್ರಚಾರಪಡಿಸುವುದರ ಭಾಗವಾಗಿ, ವಾಣಿಜ್ಯ ಹೂಡಿಕೆ ಸಚಿವಾಲಯ, ನಗರಸಭೆ, ಗ್ರಾಮೀಣ ವ್ಯವಹಾರಗಳ ಸಚಿವಾಲಯ ಮತ್ತು ಸೌದಿ ಅರೇಬಿಯನ್ ಕರೆನ್ಸಿ ಏಜೆನ್ಸಿಯ ಸಹಕಾರದೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು