ಮುಂಬೈ: ಪ್ರಸ್ತುತ ಲಾಕ್ಡೌನ್ ಹಿನ್ನೆಲೆಯಲ್ಲಿ ಬಡ ಸ್ಲಂ ನಿವಾಸಿಗಳಿಗೆ ಆಮಿರ್ ಖಾನ್ ಹಣ ಹಂಚಿದ್ದಾರೆ ಎಂದು ವ್ಯಕ್ತಿಯೊಬ್ಬರು ವಿಡಿಯೋ ಮೂಲಕ ಧನ್ಯವಾದ ತಿಳಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಆ ವಿಡಿಯೋ ವೈರಲ್ ಆಗಿತ್ತು.
ದೆಹಲಿಯಲ್ಲಿ ಹಂಚಲು ತಂದಿದ್ದ ಪ್ರತಿ ಒಂದು ಕೆಜಿ ಗೋಧಿ ಹಿಟ್ಟಿನ ಚೀಲದಲ್ಲಿ ಆಮಿರ್ ಖಾನ್ 15 ಸಾವಿರ ರೂ. ಹಣ ಇಟ್ಟು ಕಳಿಸಿದ್ದಾರೆ ಎಂದು ವಿಡಿಯೋದಲ್ಲಿ ಹೇಳಲಾಗಿತ್ತು. ಜೊತೆಗೆ ಒಂದು ಫೋಟೋ ಕೂಡ ಗಮನ ಸೆಳೆದಿತ್ತು.
ಆದರೆ ಈ ಬಗ್ಗೆ ಆಮಿರ್ ಖಾನ್ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಸಹಾಯ ಮಾಡಿದ್ದನ್ನು ಹೇಳಿಕೊಳ್ಳುವ ಗುಣ ಅವರದ್ದಲ್ಲ. ಹಾಗಾಗಿ ಈ ವಿಚಾರವನ್ನು ಗೌಪ್ಯವಾಗಿ ಮಾಡುತ್ತಿದ್ದಾರೆ ಎಂದು ಆಮಿರ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪರ-ವಿರೋಧದ ಚರ್ಚೆ ಜೋರಾಗಿಯೇ ನಡೆಯುತ್ತಿತ್ತು. ಈಗ ಆದರ ಬಗ್ಗೆ ಸ್ವತಃ ಆಮಿರ್ ಖಾನ್ ಬಾಯಿ ಬಿಟ್ಟಿದ್ದಾರೆ.
ಈ ಬಗ್ಗೆ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ ಖಾನ್. ‘ಗೈಸ್, ಗೋಧಿ ಚೀಲದಲ್ಲಿ ಹಣ ಇಟ್ಟವನು ನಾನಲ್ಲ. ಅದು ಸಂಪೂರ್ಣ ಸುಳ್ಳು ಸುದ್ದಿ ಆಗಿರಬಹುದು ಅಥವಾ ರಾಬಿನ್ ಹುಡ್ ತಮ್ಮ ಬಗ್ಗೆ ಹೇಳಿಕೊಳ್ಳಲು ಇಷ್ಟ ಇಲ್ಲದಿರಬಹುದು. ಮನೆಯಲ್ಲೇ ಇರಿ’ ಎಂದು ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ.
Guys, I am not the person putting money in wheat bags. Its either a fake story completely, or Robin Hood doesn’t want to reveal himself!
Stay safe.
Love.
a.— Aamir Khan (@aamir_khan) May 4, 2020
ಆಮಿರ್ ಖಾನ್ ಈ ಕೆಲಸ ಮಾಡಿಲ್ಲ ಎಂಬುದಾದರೆ ನಿಜಕ್ಕೂ ಆ ಗೋಧಿ ಚೀಲಗಳಲ್ಲಿ ಹಣ ಇಟ್ಟು ಹಂಚಿದವರು ಯಾರು ಎಂಬ ಪ್ರಶ್ನೆ ಈಗ ಮೂಡಿದೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ
ಕಳಮಶ್ಶೇರಿ ಘಟನೆ ಬಾಂಬ್ ಸ್ಪೋಟದಿಂದ- ಖಚಿತಪಡಿಸಿದ ಡಿಜಿಪಿ ಶೇಖ್ ದರ್ವೇಶ್