ದೋಹಾ: ಖತರ್ನಿಂದ ಭಾರತಕ್ಕೆ ತೆರಳುವವರ ನೋಂದಣಿಗಾಗಿ ಭಾರತೀಯ ರಾಯಭಾರ ಕಚೇರಿಯು ಹೊಸ ಪೋರ್ಟಲ್ ಅನ್ನು ಪ್ರಾರಂಭಿಸಿದೆ.
ಹೊಸ ನೋಂದಣಿ ಲಿಂಕ್: https://www.indianembassyqatar.gov.in/indian_nationals_repatriation_reg_form
ಈ ಹಿಂದಿನ ನೋಂದಣಿಯಲ್ಲಿನ ತಾಂತ್ರಿಕ ತೊಂದರೆಯಿಂದ ಕೆಲವರಿಗೆ ಪ್ರಯಾಣ ವಿಳಂಬವಾಗಿದ್ದು, ಆ ಕಾರಣಕ್ಕಾಗಿ ಹೊಸ ಪೋರ್ಟಲ್ ಅನ್ನು ರಚಿಸಲಾಗಿದೆ ಎಂದು ಹೇಳಲಾಗಿದೆ.
ಗೂಗಲ್ ಡಾಟಾ ಶೀಟ್ ಮೂಲಕ ಈ ಹಿಂದೆ ಪ್ರಯಾಣಿಕರಿಂದ ವಿವರಗಳನ್ನು ಸಂಗ್ರಹಿಸಲಾಗುತ್ತಿದ್ದವು. ಇದರಲ್ಲಿ ಖತರ್ ಐಡಿ ಮತ್ತು ವೀಸಾ ಸಂಖ್ಯೆಯನ್ನು ನಮೂದಿಸದ ಕಾರಣ ಪ್ರಯಾಣಕ್ಕೆ ಅಡ್ಡಿಯಾಗಿದೆ ಎನ್ನಲಾಗಿದೆ. ಹೊಸ ಪೋರ್ಟಲ್ನಲ್ಲಿ ಅವುಗಳನ್ನು ನಮೂದಿಸುವ ಆಯ್ಕೆಯನ್ನು ನೀಡಲಾಗಿದೆ.
ಈಗಾಗಲೇ ನೋಂದಾಯಿಸಿಕೊಂಡು ಅವಕಾಶಕ್ಕಾಗಿ ಕಾಯುತ್ತಿರುವವರು ಕೂಡ ಹೊಸ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬೇಕು. ಹೊಸ ಪೋರ್ಟಲ್ ನಲ್ಲಿ ನೋಂದಣಿ ಪೂರ್ಣಗೊಂಡ ನಂತರ, ಇಮೇಲ್ ಮೂಲಕ ದೃಢೀಕರಣವನ್ನು ನೀಡಲಾಗುತ್ತದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ