ಬೆಂಗಳೂರು: ಕೋವಿಡ್ ಹರಡುವಿಕೆಯ ಹಿನ್ನೆಲೆಯಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ವಾರ್ಷಿಕ ಪರೀಕ್ಷೆ ನಡೆಸದೇ ಒಂಬತ್ತನೇ ತರಗತಿ ವರೆಗಿನ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸಲಾಗಿದ್ದು, ಇದೀಗ ಹೊಸ ಶೈಕ್ಷಣಿಕ ವರ್ಷ ಯಾವಾಗ ಪ್ರಾರಂಭವಾಗುತ್ತದೆ ಎಂಬ ಗೊಂದಲ ಮುಂದುವರೆದಿದೆ.
ಈ ನಡುವೆ ಹೊಸ ಮಾರ್ಗಸೂಚಿಯೊಂದನ್ನು ಬಿಡುಗಡೆಗೊಳಿಸಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಕುರಿತಾಗಿ ಮಾರ್ಗಸೂಚಿಯೊಂದನ್ನು ಇಂದು ಬಿಡುಗಡೆ ಮಾಡಿದೆ.
ಮಾರ್ಗಸೂಚಿಯಲ್ಲಿನ ಪ್ರಮುಖ ಸೂಚನೆಗಳು:
- ಶಾಲಾ ತರಗತಿ ಕೊಠಡಿಗಳಲ್ಲಿ ಸಾಮಾಜಿಲ ಅಂತರ ಕಾಯ್ದುಕೊಳ್ಳಲು ಒಂದು ಡೆಸ್ಕ್ ನಲ್ಲಿ ಮೂವರ ವಿದ್ಯಾರ್ಥಿಗಳಿಗೆ ಮಾತ್ರ ಕುಳಿತುಕೊಳ್ಳಲು ಅವಕಾಶ.
- ಈ ಸಂದರ್ಭದಲ್ಲಿ ಕೊಠಡಿಗಳ ಕೊರತೆ ಕಂಡುಬಂದರೆ ಶಾಲಾ ಗ್ರಂಥಾಲಯ ಕೊಠಡಿ, ಕ್ರೀಡಾ ಕೊಠಡಿ ಮತ್ತು ಕಂಪ್ಯೂಟರ್ ಕೊಠಡಿಗಳನ್ನು ಬಳಸಿಕೊಳ್ಳಬಹುದು.
- ಇನ್ನು ಜನವಸತಿ ಪ್ರದೇಶಗಳಲ್ಲಿ ಲಭ್ಯವಿರುವ ಸಮುದಾಯ ಭವನಗಳು, ಸರಕಾರಿ ಕಟ್ಟಡಗಳು ಹಾಗೂ ಮಧ್ಯಾಹ್ನದ ಬಳಕ ಲಭ್ಯವಿರುವ ಅಂಗನವಾಡಿ ಕಟ್ಟಡಗಳನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.
ಶಿಪ್ಟ್ (ಪಾಳಿ) ಪದ್ಧತಿಯಲ್ಲಿ ತರಗತಿಗಳನ್ನು ನಡೆಸುವುದು:
ರಾಜ್ಯದಲ್ಲಿ 1 ರಿಂದ 5 ನೇ ತರಗತಿವರೆಗಿನ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇರುವುದರಿಂದ ಇವುಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಪಾಳಿ ವ್ಯವಸ್ಥೆಯಲ್ಲಿ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ.
1 ರಿಂದ 7ನೇ ತರಗತಿವರಗಿನ ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ತರಗತಿ ನಡೆಸಲು ಲಭ್ಯ ಎಲ್ಲಾ ವ್ಯವಸ್ಥೆಗಳು ಸಾಲದಾದಲ್ಲಿ ಪಾಳಿ ಪದ್ದತಿಯಲ್ಲಿ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ.
- 1 ಮತ್ತು 2ನೇ ತರಗತಿ ನಲಿ ಕಲಿ ಮಕ್ಕಳನ್ನು ಒಟ್ಟಿಗೆ ಸೇರ್ಪಡೆ ಮಾಡಿ ಬೋಧನೆಗೆ ಅವಕಾಶ.
- 1ರಿಂದ 7ನೇ ತರಗತಿಯವರೆಗೆ ಶಿಕ್ಷಕರ ಕೊರತೆ ಇದ್ದಲ್ಲಿ ಸ್ಥಳೀಯವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅವಕಾಶ.
- ಪ್ರಾಥಮಿಕ ಶಾಲೆಗಳಲ್ಲಿಯೂ ಪದವಿಗಳನ್ನು ಪಡೆದಿರುವ ಶಿಕ್ಷಕರು ಲಭ್ಯವಿರುವುದರಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಪರಸ್ಪರ ಸಮಾಲೋಚನೆ ನಡೆಸಿ ಪ್ರೌಢ ಶಾಲಾ ಶಿಕ್ಷಕರು 6 ಮತ್ತು 7 ನೇ ತರಗತಿಗಳಿಗೂ ಪ್ರಾಥಮಿಕ ಶಾಲೆಗಳಲ್ಲಿ ಪದವಿ ಹೊಂದಿರುವ ಶಿಕ್ಷಕರು 8 ಮತ್ತು 9ನೇ ತರಗತಿಗಳಿಗೂ ಬೋಧಿಸಲು ಅವಕಾಶ.
- ಸದ್ಯಕ್ಕೆ ಪಿಯು ತರಗತಿಗಳು 10 ಗಂಟೆಯಿಂದ 3.30ರವರೆಗೆ ನಡೆಯುತ್ತಿವೆ ಆದರೆ ಈ ತರಗತಿಗಳನ್ನು ಬೆಳಿಗ್ಗೆ 8.30 ರಿಂದ 12.30ರವರೆಗೆ ನಡೆಸಿದಲ್ಲಿ ಪ್ರೌಢಶಾಲಾ ಕೊಠಡಿಗಳನ್ನು ಬಳಸಿಕೊಂಡು ಪಿಯು ತರಗತಿಗಳನ್ನು ಸೂಕ್ತ ಸಾಮಾಜಿಕ ಅಂತರದೊಂದಿಗೆ ನಡೆಸಲು ಸೂಚನೆ.
- ರಾಜ್ಯದ ತಾಲೂಕು/ಹೋಬಳಿ ಕೇಂದ್ರಗಳಲ್ಲಿ ಕೆಲವು ಶಾಲೆಗಳು ಮಕ್ಕಳ ಕೊರತೆಯಿಂದ ಮುಚ್ಚಲ್ಪಟ್ಟಿದ್ದು, ಅವುಗಳನ್ನು ಅಗತ್ಯ ದುರಸ್ತಿ ಮಾಡಿಸಿ ಪ್ರೌಢಶಾಲೆಯ ಕೆಲವು ತರಗತಿಗಳನ್ನು ಅಲ್ಲಿಗೆ ಸ್ಥಳಾಂತರಿಸಲು ಸೂಚನೆ.
ಪಾಳಿ ಪದ್ಧತಿಯಲ್ಲಿ ತರಗತಿ ಸಮಯಗಳ ವಿಂಗಡನೆ:
- ಮೊದಲನೇ ಪಾಳಿ ಸಮಯ ಬೆಳಿಗ್ಗೆ 7.50ರಿಂದ ಪ್ರಾರಂಭಗೊಂಡು ಮಧ್ಯಾಹ್ನ 12.20ರವರೆಗೆ ನಡೆಸುವುದು ಹಾಗೂ ಎರಡನೇ ಪಾಳಿಯನ್ನು ಮಧ್ಯಾಹ್ನ 12.10ರಿಂದ ಸಂಜೆ 5.00 ಗಂಟೆಯವರೆಗೆ ನಡೆಸಲು ಸಮಾಲೋಚನೆ ಮಾಡುವಂತೆ ಸೂಚನೆ.
- ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ಸಾರಿಗೆ ವ್ಯವಸ್ಥೆಯನ್ನು ಒದಗಿಸುವಾಗ ವಿದ್ಯಾರ್ಥಿಗಳನ್ನು ವಾಹನಗಳಲ್ಲಿ ಕರೆತರುವಾಗ ಸೂಕ್ತ ಸಾಮಾಜಿಕ ಅಂತರ ನಿಯಮಗಳನ್ನು ಪಾಲನೆ ಮಾಡಲು ನಿರ್ದೇಶನ ನೀಡಲಾಗಿದೆ















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ