ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 103 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು 3970 ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಶನಿವಾರದ ವೇಳೆಗೆ ಸೋಂಕಿತರ ಸಂಖ್ಯೆ 85,970 ರಷ್ಟಿದ್ದು ಒಟ್ಟು ಮೃತರ ಸಂಖ್ಯೆ 2752 ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ಪ್ರಸ್ತುತ ದೇಶದಲ್ಲಿ ಇನ್ನೂ 53035 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ವರದಿಗಳು ತಿಳಿಸಿವೆ.ಈ ಮೂಲಕ ವಿಶ್ವದಲ್ಲಿಯೇ ಮೊದಲ ಬಾರಿಗೆ ಕೊರೋನಾ ವೈರಸ್ ಕಾಣಿಸಿಕೊಂಡ ಚೀನಾವನ್ನು ಭಾರತ ಹಿಂದಿಕ್ಕಿದೆ.
ಇದರ ಜೊತೆಗೆ ಅತೀ ಹೆಚ್ಚು ಸೋಂಕಿತರು ಇರುವ ವಿಶ್ವದ ದೇಶಗಳ ಪೈಕಿ 11ನೇ ಸ್ಥಾನಕ್ಕೂ ಏರಿದೆ. ಪ್ರಸ್ತುತ 1.16ಲಕ್ಷ ಸೋಂಕಿತರೊಂದಿಗೆ ಇರಾನ್ 10ನೇ ಸ್ಥಾನದಲ್ಲಿದೆ. ಇದೇ ಪ್ರಮಾಣದಲ್ಲಿ ಸೋಂಕಿತರು ಪ್ರತಿನಿತ್ಯ ಪತ್ತೆಯಾಗುತ್ತಾ ಹೋದರೆ, ಇರಾನ್ ದೇಶವನ್ನೂ ಭಾರತ ಹಿಂದಿಕ್ಕುವ ದಿನಗಳು ತೀರಾ ದೂರವೇನೂ ಇಲ್ಲ.
ಈ ನಡುವೆ 85940 ಮಂದಿ ಸೋಂಕಿತರ ಪೈಕಿ 30153 ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಅಂದರೆ ಶೇ 33.6 ರಷ್ಟು ಜನರು ಚೇತರಿಸಿಕೊಂಡಿದ್ದಾರೆ.
2019ರ ನ.17ರಂದು ಚೀನಾದಲ್ಲಿ ಮೊದಲ ಕೊರೋನಾ ಕೇಸು ಪತ್ತೆಯಾಗಿತ್ತು. ಈ ನಡುವೆ ಮೃತರ ಸಂಖ್ಯೆಯಲ್ಲಿ ಭಾರತದ ಚೀನಾ ಮಟ್ಟಕ್ಕೆ ತಲುಪಿಲ್ಲ ಎಂಬುದು ತುಸು ಸಮಾಧಾನಕರ ವಿಚಾರವಾಗಿದೆ. ಈ ಹಂತದಲ್ಲಿ ಚೀನಾದಲ್ಲಿ ಸಾವಿನ ಸಂಖ್ಯೆ ಶೇ. 5.5ರಷ್ಟಿತ್ತು. ಆದರೆ, ಭಾರತದಲ್ಲಿ ಶೇ.3.2ರಷ್ಟಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ