ಬೆಂಗಳೂರು: ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಜನರನ್ನು ದಾರಿ ತಪ್ಪಿಸುವ ಹೇಳಿಕೆಯನ್ನುನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು ನೀಡಿದೆ.
ದೇಶದಲ್ಲಿ ಕೋವಿಡ್19 ನಿಯಂತ್ರಣಕ್ಕೆ ಬರಲು ಪ್ರಧಾನಿ ನರೇಂದ್ರ ಮೋದಿ ಕಾರಣ ಎಂದಿದ್ದಾರೆ. ಅಲ್ಲದೆ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಪ್ರಧಾನಿ ಮೋದಿಗೆ ಅವಕಾಶ ಕೊಟ್ಟಿದ್ದಾರೆ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
ಜಾವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯಾಗಿಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರನ್ನ ದಾರಿತಪ್ಪಿಸುತ್ತಿದ್ದಾರೆ. ಕೂಡಲೇ ಕಟೀಲು ಅವರ ಹೇಳಿಕೆಗಳ ಬಗ್ಗೆ ಕ್ರಮಕೈಗೊಳ್ಳಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕಾಂಗ್ರೆಸ್ ಮುಖಂಡರು ಹಾಗೂ ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜಾ ಹಾಗೂ ಪ್ರಕಾಶ್ ರಾಥೋಡ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಈ ಕುರಿತಾಗಿ ದೂರು ನೀಡಿದ್ದಾರೆ.