ಜಿದ್ದಾ: ಕೋವಿಡ್ ಪ್ರಕರಣಗಳು ಏರಿಕೆ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದ ಜಿದ್ದಾದಲ್ಲಿ ಮುಂದಿನ 15 ದಿನಗಳವರೆಗೆ ಕರ್ಫ್ಯೂ ಸಡಿಲಿಕೆಯನ್ನು ಭಾಗಶಃ ಹಿಂಪಡೆಯಲಾಗಿದೆ.ಈ ಆದೇಶವು ಇಂದಿನಿಂದ ಜಾರಿಗೆ ಬರಲಿದ್ದು, ಜೂನ್ 20 ರ ವರೆಗೆ ಮುಂದುವರಿಯಲಿದೆ.
ಮಧ್ಯಾಹ್ನ 3 ಗಂಟೆಯಿಂದ ಬೆಳಿಗ್ಗೆ ಆರು ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ.ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 3 ರವರೆಗೆ ಸಡಿಲಿಕೆ ಇರಲಿದೆ.ಮಸೀದಿಗಳಲ್ಲಿ ಪ್ರಾರ್ಥನೆಗೂ ನಿರ್ಬಂಧ ಹೇರಲಾಗಿದೆ. ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಕೆಲಸ ಮಾಡುವಂತಿಲ್ಲ.
ಕರ್ಫ್ಯೂ ಇಲ್ಲದ ಸಮಯದಲ್ಲಿ, ಜಿದ್ದಾಗೆ ಪ್ರವೇಶಿಸಲು ಅಥವಾ ನಿರ್ಗಮಿಸಲು ಅನುಮತಿಯಿದೆ. ವಿಮಾನ, ರೈಲು ಮತ್ತು ರಸ್ತೆ ಸಂಚಾರ ಮುಂದುವರಿಯಲಿದೆ. ಹೋಟೆಲ್‌ಗಳಲ್ಲಿ ಆಹಾರ ಸೇವಿಸುವುದನ್ನು ನೀಷೇಧಿಸಲಾಗಿದೆ. ಐದಕ್ಕಿಂತ ಹೆಚ್ಚು ಜನರು ಒಗ್ಗೂಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು,ವಿದೇಶಿಯರಾಗಿದ್ದರೆ ಅವರನ್ನು ಗಡೀಪಾರು ಮಾಡಲಾಗುವುದು.
ಕೋವಿಡ್ ಹರಡುವುದನ್ನು ತಡೆಯಲು ವಿಧಿಸಲಾಗಿರುವ ಷರತ್ತುಗಳನ್ನು ಪಾಲಿಸದಿರುವುದೇ ಕೋವಿಡ್ ಪ್ರಕರಣ ಹೆಚ್ಚಳವಾಗಲು ಕಾರಣ. ರಿಯಾದ್‌ನಲ್ಲೂ ಪ್ರಕರಣಗಳು ಹೆಚ್ಚುತ್ತಿದ್ದು,ಅಲ್ಲಿ ಕೈಗೊಳ್ಳಬೇಕಾದ ನಿಯಂತ್ರಣದ ಬಗ್ಗೆ ಅವಲೋಕನ ನಡೆಸಲಾಗುತ್ತಿದೆ. ಉಳಿದ ನಗರಗಳ ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ಕೊಗೊಳ್ಳಲಾಗುವುದು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ