ನವದೆಹಲಿ:ಗ್ರಾಹಕರಿಗೆ ತೈಲ ಬೆಲೆ ಏರಿಕೆಯ ಬಿಸಿ ತಟ್ಟಿದೆ.ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಸಾಮಾನ್ಯರು ಕಂಗಾಲಾಗಿದ್ದಾರೆ. ಕಳೆದ ಮೂರು ದಿನಗಳಿಂದ ತಲಾ 60 ಪೈಸೆ ಏರಿಕೆಯಾಗಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಸತತ ನಾಲ್ಕನೇ ದಿನವೂ ಏರಿಕೆ ಮಾಡಲಾಗಿದೆ. ಬುಧವಾರ ಲೀಟರ್ ಪೆಟ್ರೋಲ್ ದರವು 40 ಪೈಸೆ ಹಾಗೂ ಡೀಸೆಲ್ ಬೆಲೆ 45 ಪೈಸೆ ಏರಿಕೆ ಮಾಡಲಾಗಿದೆ.
ಇದರೊಂದಿಗೆ ನಾಲ್ಕು ದಿನದಲ್ಲಿ ಪೆಟ್ರೋಲ್ ದರ 2.15 ಮತ್ತು ಡೀಸೆಲ್ ದರ ರೂ.2.23ರಷ್ಟು ಹೆಚ್ಚಳ ಮಾಡಿದಂತಾಗಿದೆ. ಏರಿಕೆ ಬಳಿಕ ಬೆಂಗಳೂರಿಲ್ಲಿ ಪೆಟ್ರೋಲ್ ದರ 75.77 ಮತ್ತು ಡೀಸೆಲ್ ದರ 68.09ಕ್ಕೆ ತಲುಪಿದೆ. ತೈಲದ ಮೇಲೆ ಬಾರೀ ಪ್ರಮಾಣದ ತೆರಿಗೆ ಹೇರಲಾಗಿದ್ದು, ಪ್ರಸಕ್ತ ಪೆಟ್ರೋಲ್ ಮೇಲೆ ಶೇ.275ರಷ್ಟು ಮತ್ತು ಡೀಸೆಲ್ ಮೇಲೆ ಶೇ.255ರಷ್ಟು ತೆರಿಗೆಯನ್ನು ಗ್ರಾಹಕರು ಪಾವತಿ ಮಾಡುತ್ತಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್ ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಏರಿಳಿತ ಕಾಣುತ್ತವೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ಬಳಿಕ ಪ್ರತಿ ನಿತ್ಯ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ. ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಹಾಗೂ ಡೀಸೆಲ್ ದರವನ್ನು ನೀಡುತ್ತವೆ.
ಈ ತಿಂಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಹೆಚ್ಚಳ?:
ಲಾಕ್‌ಡೌನ್ ಸಡಿಲಿಕೆ ಆಗಿರುವ ಬೆನ್ನಿಗೆ ದೇಶದ ಎರಡು ಪ್ರಮುಖ ಪೆಟ್ರೋಲಿಯಂ ತೈಲ ಕಂಪೆನಿಗಳು ದರ ಪರಿಷ್ಕರಣೆಗೆ ಮುಂದಾಗಿದ್ದು, ಜೂನ್ ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕನಿಷ್ಠ ಲೀಟರ್‌ಗೆ 4 ರಿಂದ 5 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಇನ್ನೂ ಯಾರು ಅಧಿಕೃತವಾಗಿ ಹೇಳಿಕೆ ನೀಡಿಲ್ಲ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ