ದಮ್ಮಾಮ್: ಕೋವಿಡ್ 19 ಹಿನ್ನೆಲೆಯಲ್ಲಿ ವಿದೇಶದಲ್ಲಿ ಸಂಕಷ್ಟದಲ್ಲಿರು ಭಾರತೀಯರನ್ನು ತಾಯಿನಾಡಿಗೆ ಕರೆತರುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಆರಂಭಿಸಿದ್ದರೂ, ಇನ್ನೂ ಬಹುತೇಕ ಮಂದಿ ವಿದೇಶದಲ್ಲಿ ಅತಂತ್ರರಾಗಿ ಉಳಿದಿದ್ದಾರೆ.
ಈ ನಿಟ್ಟಿನಲ್ಲಿ ಸಾಕೋ ಕಂಪನಿಯು ಸಂಕಷ್ಟದಲ್ಲಿರುವ ಕನ್ನಡಿಗರಿಗಾಗಿ ಎಲ್ಲಾ ಖರ್ಚುವೆಚ್ಚವನ್ನು ಸಂಸ್ಥೆಯೇ ಭರಿಸಿ ಉಚಿತ ವಿಮಾನ ಪ್ರಯಾಣವನ್ನು ಏರ್ಪಡಿಸಿದೆ.
ದಮಾಮ್‌ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಜೆ 6:30 ಕ್ಕೆ (ಸೌದಿ ಸಮಯ) ಹೊರಟ ವಿಮಾನವು ಮಂಗಳೂರಿಗೆ ರಾತ್ರಿ 1:30 ಸುಮಾರಿಗೆ ಆಗಮಿಸಲಿದೆ. ಎಂಟು ಚಿಕ್ಕ ಮಕ್ಕಳು ಸಹಿತ 175 ಅತಂತ್ರ ಕನ್ನಡಿಗರು ಇದರಲ್ಲಿ ಪ್ರಯಾಣ ಬೆಳೆಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸಾಕೋ ಕಂಪೆನಿಯ ನಿರ್ದೇಶಕರಾದ ಅಲ್ತಾಫ್ ಉಳ್ಳಾಲ್ ಹಾಗೂ ಬಶೀರ್ ಸಾಗರ್, ಎಲ್ಲ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ದಮಾಮ್ ವಿಮಾನ ನಿಲ್ದಾಣದಿಂದ 175 ಅತಂತ್ರ ಕನ್ನಡಿಗರನ್ನು ಹೊತ್ತ ವಿಮಾನವು ಇಂದು ರಾತ್ರಿ ಮಂಗಳೂರಿಗೆ ತಲುಪಲಿದೆ ಎಂದು ಹೇಳಿದ್ದಾರೆ.
ವಿಶೇಷ ಬಾಡಿಗೆ ವಿಮಾನದಲ್ಲಿ ತಮ್ಮ ಸಂಸ್ಥೆಯ ಯಾವುದೇ ಸಿಬ್ಬಂದಿ ಅಥವಾ ಸಂಬಂಧಿಕರು ಪ್ರಯಾಣ ಬೆಳೆಸುತ್ತಿಲ್ಲ; ಬದಲಾಗಿ ಸಂಕಷ್ಟದಲ್ಲಿನ ಕನ್ನಡಿಗರಿಗಾಗಿಯೇ ಈ ಬಾಡಿಗೆ ವಿಮಾನವನ್ನು ಕಳುಹಿಸಲಾಗುತ್ತಿದೆ. ಎಲ್ಲ ಪ್ರಯಾಣಿಕರ ಪ್ರಯಾಣ ವೆಚ್ಚವನ್ನು ಕಂಪೆನಿಯೇ ಭರಿಸುತ್ತಿದೆ. ಅಲ್ಲದೆ, ಮಂಗಳೂರಿನಲ್ಲಿ ಕ್ವಾರಂಟೈನ್‌ಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜೊತೆಗೆ ಕೊರೋನ ಪರೀಕ್ಷಾ ವೆಚ್ಚವನ್ನೂ ಸಂಸ್ಥೆಯೇ ಪಾವತಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಾಕೋ ಕಂಪೆನಿಯು ಬಾಡಿಗೆ ವಿಮಾನದಲ್ಲಿ ಪ್ರಯಾಣಿಸುವವರ ಪಟ್ಟಿ ಅಂತಿಮಗೊಳಿಸಲು ಈ ಮೊದಲು ಹೆಲ್ಪ್ ಡೆಸ್ಕ್ ಪ್ರಾರಂಭಿಸಿತ್ತು. ಇದಕ್ಕೆ ಬಂದಿದ್ದ ಕರೆಗಳ ಆಧಾರದಲ್ಲಿ ಗರ್ಭಿಣಿಯರು, ವಿಸಿಟ್ ವೀಸಾದಲ್ಲಿ ಬಂದು ಅತಂತ್ರರಾಗಿರುವ ಹಿರಿಯ ನಾಗರಿಕರು, ತುರ್ತು ವೈದ್ಯಕೀಯ ಚಿಕಿತ್ಸೆ ಅಗತ್ಯ ಇರುವವರು, ಕೆಲಸ ಕಳೆದುಕೊಂಡು ಕಂಗಾಲಾಗಿರುವವರು, ಊರಲ್ಲಿ ನಿಕಟ ಸಂಬಂಧಿಗಳು ಮೃತಪಟ್ಟವರು ಹಾಗೂ ತೀರಾ ಇತರ ತುರ್ತು ಅಗತ್ಯ ಇರುವವರರನ್ನು ಆದ್ಯತೆಯ ಮೇಲೆ ಆಯ್ಕೆ ಮಾಡಿ ಕಳುಹಿಸಲಾಗಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ















ಇನ್ನಷ್ಟು ಸುದ್ದಿಗಳು
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?