ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಕೆ.ಎಸ್.ಆರ್.ಟಿ.ಬಸ್ ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ್ದು, ಈ ಬಗ್ಗೆ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ.
ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ವಿದ್ಯಾರ್ಥಿಗಳು ತೆರಳುವಾಗ ಹಾಗೂ ಹಿಂದಿರುಗುವಾಗ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ತಿಳಿಸಿದ್ದಾರೆ.
ಜೂ.25ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಹಾಗೂ ಜೂ.18ರಂದು ದ್ವಿತೀಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಅವರು ಹೊರಡಿಸಿರುವ ಸುತ್ತೊಲೆಯಲ್ಲಿ ತಿಳಿಸಲಾಗಿದೆ.
ಈ ಸಂಬಂಧ ನಿಗಮ ಎಲ್ಲಾ ಚಾಲಕ-ನಿರ್ವಾಹಕರಿಗೆ ತಿಳುವಳಿಕೆ ನೀಡಲು ಸೂಚಿಸಲಾಗಿದೆ. ಅಲ್ಲದೆ ಬಸ್ ತೆರಳುವ ಮಾರ್ಗದಲ್ಲಿ ಪರೀಕ್ಷೆ ಕೇಂದ್ರಗಳು ಇದ್ದಲ್ಲಿ ವಿದ್ಯಾರ್ಥಿಗಳು ಹತ್ತಲು ಮತ್ತು ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆಗೂ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
ಇದೇ ಜೂನ್ 25 ಜುಲೈ 3ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ. ಮತ್ತೊಂದೆಡೆ ಪರೀಕ್ಷೆ ನಡೆಸದಂತೆ ವಿರೋಧಗಳು ಸಹ ವ್ಯಕ್ತವಾಗುತ್ತಿವೆ. ಆದರೂ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಯಾವುದೇ ತೊಂದರೆಯಾಗದಂತೆ ಪರೀಕ್ಷೆ ನಡೆಸಲು ಮುಂದಾಗಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ