ಬೆಂಗಳೂರು: ಕೊರೊನಾದಿಂದ ತೀವ್ರ ಆರ್ಥಿಕ ಸಂಕಷ್ಟ ಉಂಟಾಗಿರುವ ಕಾರಣ 2020–21ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಕಳೆದ ವರ್ಷಕ್ಕಿಂತ ಅಧಿಕ ಬೋಧನಾ ಶುಲ್ಕ ಪಡೆಯುವಂತಿಲ್ಲ ಎಂದು ಸೂಚಿಸಿ ಸರ್ಕಾರ ಶುಕ್ರವಾರ ಸುತ್ತೋಲೆ ಹೊರಡಿಸಿದೆ.
‘ಕರ್ನಾಟಕ ಶಿಕ್ಷಣ ನಿಯಮ 1999ರಲ್ಲಿ ಕಲ್ಪಿಸಿರುವ ಅವಕಾಶವನ್ನು ಬಳಸಿಕೊಂಡು, ಕರ್ನಾಟಕ ಶಿಕ್ಷಣ ಕಾಯ್ದೆ–1983, ಸೆಕ್ಷನ್ 133, ಉಪನಿಯಮ 2ರಂತೆ ಎಲ್ಲಾ ಖಾಸಗಿ ಶಾಲೆಗಳು ಈ ವರ್ಷ ಬೋಧನಾ ಶುಲ್ಕ ಹೆಚ್ಚಿಸುವಂತಿಲ್ಲ. ಹೆಚ್ಚಿಸಿದ್ದೇ ಆದಲ್ಲಿ ಅಂತಹ ಶಾಲೆಗಳ ವಿರುದ್ಧ ಕರ್ನಾಟಕ ಶಿಕ್ಷಣ ಕಾಯ್ದೆ–124 (ಎ) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಲಾಗಿದೆ.
ಮಾರ್ಚ್ 24ರಿಂದ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಎಲ್ಲಾ ಕ್ಷೇತ್ರಗಳಲ್ಲೂ ಆರ್ಥಿಕ ಸಂಕಷ್ಟ ಉಂಟಾಗಿದೆ. ಹೀಗಾಗಿ ಶಾಲೆಗಳು ಶುಲ್ಕ ಹೆಚ್ಚಿಸದಂತೆ ಸೂಚಿಸಬೇಕು ಎಂದು ಸಾರ್ವಜನಿಕರು ಸರ್ಕಾರಕ್ಕೆ ಹಲವಾರು ಮನವಿ ಸಲ್ಲಿಸಿದ ಮೇರೆಗೆ ಈ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ