ಎಲಿಮಲೆ: ಎಲಿಮಲೆ ಬದ್ರಿಯಾ ಜಮಾಅತ್ ಕಮಿಟಿ ನೇತೃತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮವು ಮಸೀದಿ ವಠಾರದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿ ಸ್ವಾಗತದೊಂದಿಗೆ ಪ್ರಾಸ್ತಾವಿಕ ಮಾತುಗಳನ್ನಾಡಿದ ಜಮಾಅತ್ ಅಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಎಲಿಮಲೆಯವರು ಪ್ರತಿವರ್ಷ ಗಿಡಗಳನ್ನು ನೆಡುವ ಮೂಲಕ ಉತ್ತಮ ಪರಿಸರ ನಿರ್ಮಾಣ ಮಾಡಲು ಪ್ರಯತ್ನಿಸಬೇಕೆಂದರು. ಮಹಮೂದ್ ಸಖಾಫಿ ಉಸ್ತಾದರು ದುಆ ನೆರವೇರಿಸಿದರು.


ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸುಳ್ಯ ವಲಯ ಅರಣ್ಯಾಧಿಕಾರಿ ಮಂಜುನಾಥರವರು ಮಾತನಾಡಿ ಉತ್ತಮ ಮಳೆ ಗಾಳಿ ಆರೋಗ್ಯಕ್ಕಾಗಿ ಗಿಡಗಳನ್ನು ನೆಟ್ಟು ಮರಗಳನ್ನು ಬೆಳೆಸಬೇಕು ಪ್ರಕೃತಿಯ ಉಳಿವೂ ಹಾಗೂ ಬೆಳವಣಿಗೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ಎಲಿಮಲೆ ಮಸೀದಿ ಕಮಿಟಿ ಯವರು ವನಮಹೋತ್ಸವ ಆಚರಿಸುವ ಮೂಲಕ ಅರ್ಥಪೂರ್ಣವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯಾಧಿಕಾರಿ ರವೀಂದ್ರ, ಅರಣ್ಯ ರಕ್ಷಕರಾದ ಜಯಪ್ರಕಾಶ್ ಚಿದಾನಂದ, ಅರಣ್ಯ ವೀಕ್ಷಕ ಸುರೇಂದ್ರ ಸಿಬ್ಬಂದಿಗಳು ಹಾಗೂ ಮಸೀದಿ ಹಿರಿಯರಾದ ಟಿ ವೈ ಇಬ್ರಾಹಿಂ, ಮಹಮ್ಮದ್ ಕುಂಞಿ ಮೇಲೆಬೈಲು, ಅಬೂಬಕ್ಕರ್ ಪಾಣಾಜೆ, ಕಲಂದರ್ ಎಲಿಮಲೆ, ಸಿದಿಕ್ ಜೂರ್ಮುಕ್ಕಿ, ಸೂಫಿ ಎಲಿಮಲೆ, ಜುನೈದ್ ಸಖಾಫಿ, ಅಬ್ದುಲ್ಲ ಜೀರ್ಮುಕ್ಕಿ, ಹೈದರ್ ಹಾಜಿ, ಅಶ್ರಫ್ ಜೀರ್ಮುಕ್ಕಿ, ಹಾಗೂ ಜಮಾಅತ್ ಸದಸ್ಯರು ಉಪಸ್ಥಿತರಿದ್ದರು. ಜಮಾಅತ್ ಕಾರ್ಯದರ್ಶಿ ಹನೀಫ್ ಮೆತ್ತಡ್ಕ ವಂಧಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ