ಉಳ್ಳಾಲ: ಅಲ್ ಮಸ್ಜಿದುಲ್ ಜಾಮಿಉಲ್ ಅಮೀನ್ ಅಳೇಕಲ ಉಳ್ಳಾಲ ಇದರ ಅದೀನದಲ್ಲಿರುವ ನಜಾತುಸ್ಸ್ವಿಬ್’ಯಾನ್ ಮದ್ರಸ ಅಳೇಕಲ ಇದರ ಆನ್ ಲೈನ್ ಕ್ಲಾಸ್ ಉದ್ಘಾಟನಾ ಸಮಾರಂಭವು, ದಿನಾಂಕ 24-6-2020 ರಂದು ಬೆಳಿಗ್ಗೆ 6:30 ಕ್ಕೆ ಅಲ್ ಮಸ್ಜಿದುಲ್ ಜಾಮಿಉಲ್ ಅಮೀನ್ ಕಛೇರಿಯಲ್ಲಿ ಪಟ್ಟಾಂಬಿ ಉಸ್ತಾದರ ದುಆದೊಂದಿಗೆ ಚಾಲನೆಗೊಂಡಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಅಧ್ಯಕ್ಷರಾದ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿಯವರು,
ಕೋವಿಡ್ 19 ಹಿನ್ನೆಲೆಯಲ್ಲಿ ಆನ್ ಲೈನ್ ಕ್ಲಾಸ್ ಪ್ರಾಮುಖ್ಯತೆ, ಪ್ರಯೋಜನ ಮತ್ತು ಅದರ ಪ್ರಾಯೋಗಿಕತೆ ಬಗ್ಗೆ ವಿವರಿಸಿದರು.
ನಂತರ ಮಾತನಾಡಿದ ಖತೀಬರಾದ ಪಟ್ಟಾಂಬಿ ಉಸ್ತಾದ್ ಪ್ರಸ್ತುತ ಆನ್ ಲೈನ್ ಕ್ಲಾಸನ್ನು ವಿದ್ಯಾರ್ಥಿಗಳು ಮತ್ತು ಪೋಷಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಸದರ್ ಉಸ್ತಾದ್ ಸದ್ರಿ ಕ್ಲಾಸ್ ಗಳ ಬಳಕೆ ಬಗ್ಗೆ ಸಾಂದರ್ಭಿಕ ಮತ್ತು ಪ್ರಾಯೋಗಿಕ ಮಾಹಿತಿ ನೀಡಿದರು.

ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಫಾರೂಕ್ ಹಾಜಿ, ಸದಸ್ಯರಾದ ಸಯ್ಯಿದ್ ಜಲಾಲುದ್ದೀನ್ ತಂಙಳ್ ,ಮದ್ರಸಾ ಸಂಚಾಲಕರಾದ ರಿಯಾಝ್ ಪುಲ್ಯಡಿ ಉಪಸ್ಥಿತರಿದ್ದರು.ಕಾರ್ಯದರ್ಶಿ ಜಾಫರ್ ಯು.ಎಸ್ ಕಾರ್ಯಕ್ರಮ ಸ್ವಾಗತಿಸಿ, ವಂದಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್