ಮಂಗಳೂರು: ರಾಜ್ಯದ ವಿವಿಧ ಕಾಲೇಜುಗಳ 2020-21ನೇ ಸಾಲಿನ ಸರಕಾರಿ ಕೋಟಾದ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಯುಜಿ ಸಿಇಟಿ ಪ್ರವೇಶ ಪರೀಕ್ಷೆಯನ್ನು ಲಾಕ್ ಡೌನ್ ಕಾರಣಕ್ಕಾಗಿ ಮುಂದೂಡಿ, ಜುಲೈ 30, 31 ಮತ್ತು ಆಗಸ್ಟ್ 1 ರಂದು ನಡೆಸುವುದೆಂದು ತೀರ್ಮಾನಿಸಲಾಗಿದೆ.
ಜುಲೈ 30 ಅಥವಾ 31 ರಂದು ರಾಜ್ಯದಲ್ಲಿ ಮುಸ್ಲಿಮರ ಪವಿತ್ರ ಹಬ್ಬ ‘ಈದುಲ್ ಅಝ್ಹಾ’ (ಬಕ್ರೀದ್) ಆಚರಿಸಲಾಗುತ್ತದೆ. ಅದೇ ದಿನ ಪರೀಕ್ಷೆ ನಡೆಸಿದಲ್ಲಿ ರಾಜ್ಯದ ಸಾವಿರಾರು ಮುಸ್ಲಿಮ್ ವಿದ್ಯಾರ್ಥಿಗಳು ಮತ್ತವರ ಕುಟುಂಬ ಪವಿತ್ರ ಹಬ್ಬಾಚರಣೆಯಿಂದ ವಂಚಿತರಾಗುತ್ತಾರೆ. ಆದ್ದರಿಂದ ಯುಜಿ ಸಿಇಟಿ ಪ್ರವೇಶ ಪರೀಕ್ಷೆಗಳ ದಿನಾಂಕಗಳನ್ನು ಮುಂದೂಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಆದೇಶ ನೀಡುವ ಮೂಲಕ ತುರ್ತು ಕ್ರಮಗೊಳ್ಳುವಂತೆ ಮಂಗಳೂರಿನ ಕರಿಯರ್ ಗೈಡೆನ್ಸ್ ಆಂಡ್ ಇನ್ಫೊರ್ಮೇಶನ್ ಸೆಂಟರ್ ನ ಅಧ್ಯಕ್ಷ ಉಮರ್ ಯು.ಹೆಚ್. ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.
ಮನವಿಯ ಯಥಾಪ್ರತಿಗಳನ್ನು ಅಲ್ಪಸಂಖ್ಯಾತರ ಕಲ್ಯಾಣ, ಉನ್ನತ ಶಿಕ್ಷಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವರುಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಕರ್ನಾಟಕ ಅಲ್ಪಸಂಖ್ಯಾತರ ಸಚಿವಾಲಯ, ವೈದ್ಯಕೀಯ ಶಿಕ್ಷಣ ಇಲಾಖೆ; ಆಡಳಿತ ನಿರ್ದೇಶಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ; ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಮಾಜಿ ಸಚಿವ, ಶಾಸಕ ಯು.ಟಿ. ಖಾದರ್ ರಿಗೆ ನೀಡಲಾಗಿದೆ ಎಂದು ಉಮರ್ ಯು.ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು