ರಾಣೇಬೆನ್ನೂರು : ಕೋವಿಡ್ ಬಾಧಿಸಿ ಮರಣ ಹೊಂದಿದ ಸ್ಥಳೀಯ ನಿವಾಸಿಯೊಬ್ಬರ ಮೃತದೇಹವನ್ನು ಬಸ್ ನಿಲ್ದಾಣದಲ್ಲೇ ಬಿಟ್ಟು ಹೋದ ಅಮಾನವೀಯ ಮತ್ತು ಬೇಜವಾಬ್ದಾರಿ ಘಟನೆ ನಡೆದಿದ್ದು ಈ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ನಲ್ವತ್ತು ವರ್ಷ ಪ್ರಾಯದ ಚಂದ್ರಶೇಖರ್ ಎಂಬವರು ಜ್ವರ ಮತ್ತು ಕೆಮ್ಮು ಕಾರಣ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೋಸ್ಕರ ದಾಖಲಾಗಿದ್ದರು ಅವರ ಗಂಟಲಿನ ದ್ರವವನ್ನು ಹೆಚ್ಚಿನ ತಪಾಸಣೆಗೆ ಲ್ಯಾಬ್ ಗೆ ಕಳುಹಿಸಲಾಗಿತ್ತು ಆದರೆ ಈ ಮಧ್ಯೆ ಚಂದ್ರಶೇಖರ್ ಮೃತಪಟ್ಟಿದ್ದು ವರದಿ ಬರುವ ಮೊದಲೇ ಮೃತದೇಹವನ್ನು ಆಸ್ಪತ್ರೆಯಿಂದ ಹಸ್ತಾ0ತರ ಮಾಡಲಾಗಿತ್ತು. ಇವೆಲ್ಲದರ ನಡುವೆ ಪ್ಲಾಸ್ಟಿಕ್ ಕವರ್ ನಲ್ಲಿ ಸುತ್ತಿದ್ದ ಮೃತದೇಹ ಬಸ್ ನಿಲ್ದಾಣದಲ್ಲಿ ಕಂಡುಬಂದಿದ್ದು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳೇ ಅತ್ಯಂತ ಬೇಜವಾಬ್ದಾರಿ ಮತ್ತು ಅಮಾನವೀಯ ಕೃತ್ಯ ಎಸಗಿದ್ದು ರಾಜ್ಯ ಸರಕಾರಕ್ಕೆ ತೀವ್ರ ಮುಜುಗರ ಎದುರಿಸುವ ಸನ್ನಿವೇಶ ಸೃಷ್ಟಿಯಾಗಿದೆ.
ತಾಲೂಕು ವೈದ್ಯಾಧಿಕಾರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿದೆ.