ಮಂಗಳೂರು:ನಗರದ ಹೊರವಲಯದ ಗುರುಪುರದ ಬಂಗ್ಲೆಗುಡ್ಡೆಯಲ್ಲಿ ಗುಡ್ಡ ಕುಸಿದು ಮಕ್ಕಳಿಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೃತ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಧನ ಘೋಷಣೆ ಮಾಡಿದ್ದು, ಪರಿಹಾರ ಮೊತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರ ವಿತರಿಸಿದರು.
ಈ ವೇಳೆ ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಗುಡ್ಡ ಕುಸಿತದಲ್ಲಿ ಮಣ್ಣಿನಡಿ ಸಿಲುಕಿ 16 ವರ್ಷದ ಬಾಲಕ ಸಫ್ವಾನ್, 10 ವರ್ಷದ ಬಾಲಕಿ ಸಹಲಾ ಭಾನುವಾರ ಮೃತಪಟ್ಟಿದ್ದರು. ಘಟನೆಯ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿ ಬಿ ಎಸ್ ಯಡ್ಯೂರಪ್ಪ ತಲಾ 5 ಲಕ್ಷ ರೂಗಳ ಪರಿಹಾರವನ್ನು ಘೋಷಣೆ ಮಾಡಿದ್ದು, ಜಿಲ್ಲಾಧಿಕಾರಿಗಳು ಕೂಡಲೇ ವಿತರಣೆ ಮಾಡಲು ಸೂಚನೆ ನೀಡಿದ್ದರು.
ಗುಡ್ಡ ಪ್ರದೇಶದಲ್ಲಿದ್ದ 19 ಮನೆಗಳ ಸ್ಥಳಾಂತರಕ್ಕೆ ಸೂಚನೆ ನೀಡಲಾಗಿದೆ. ಬೇರೆ ಗ್ರಾಮದಲ್ಲಿ ಮನೆಗಳನ್ನು ನಿರ್ಮಿಸಿ ಕೊಡಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸೂಚಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್