ಮಂಗಳೂರು: ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಮಂಗಳವಾರದಿಂದ ದಕ ಜಿಲ್ಲೆಯನ್ನು ಸಂಪೂರ್ಣ ಲಾಕ್ ಡೌನ್ ಮಾಡುವ ಕುರಿತು ತಾನು ಯಾವುದೇ ಆದೇಶ ನೀಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಕೆಲವೊಂದು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದಕ ಜಿಲ್ಲೆಯಲ್ಲಿ ಮಂಗಳವಾರದಿಂದ ಲಾಕ್ ಡೌನ್ ಹಾಕಲಾಗಿದೆ ಎಂಬ ಮಾಹಿತಿ ಬಂದ ಹಿನ್ನಲೆಯಲ್ಲಿ ಖಾಸಗಿ ವಾಹಿನಿಯೊಂದಕ್ಕೆ ಸ್ಪಷ್ಟನೆ ನೀಡಿರುವ ಸಚಿವರು ಈ ವರೆಗೆ ಅಂತಹ ಯಾವುದೇ ನಿರ್ಧಾರ ಮಾಡಿಲ್ಲ. ಸೋಮವಾರ ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಲಿದ್ದು ಈ ವೇಳೆ ಜಿಲ್ಲೆಯ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳಿಗೆ ಮನದಟ್ಟು ಮಾಡಲಾಗುವುದು ಅಲ್ಲಿಯ ತನಕ ಯಾವುದೇ ಲಾಕ್ ಡೌನ್ ಮಾಡಲಾಗುವುದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್