ಮಂಗಳೂರು, ಜು15: ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನಾಯಕತ್ವದಲ್ಲಿ ಎಸ್ ವೈ ಎಸ್ ನ ಸಹಕಾರದೊಂದಿಗೆ ಕೋವಿಡ್-19 ಸಂಬಂಧಿಸಿದಂತೆ ಅಗತ್ಯ ಮಾಹಿತಿ ಕಾರ್ಯಾಗಾರವು ಇಂದು ಜಿಲ್ಲೆಯ ಮಂಗಳೂರು, ಬಿ.ಸಿ.ರೋಡು, ಉಪ್ಪಿನಂಗಡಿ, ಪುತ್ತೂರು ಕೇಂದ್ರಗಳಲ್ಲಿ ನಡೆಯಿತು.

ಸುಳ್ಯ, ಪುತ್ತೂರು, ವಿಟ್ಲ ವ್ಯಾಪ್ತಿಯ ತಂಡಕ್ಕೆ ಪುತ್ತೂರು ತಾಲೂಕಿನ ಈಶ್ವರಮಂಗಲ ತ್ವೈಬಾ ಸೆಂಟರ್ ನಲ್ಲಿಯೂ, ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ವ್ಯಾಪ್ತಿಯ ತಂಡಕ್ಕೆ ಉಪ್ಪಿನಂಗಡಿ ಸುನ್ನೀ ಸೆಂಟರ್ ನಲ್ಲಿಯೂ, ಮುಡಿಪು, ಬಂಟ್ವಾಳ, ಮೂಡಬಿದ್ರೆ ವ್ಯಾಪ್ತಿಯ ತಂಡಕ್ಕೆ ಬಿ.ಸಿ.ರೋಡಿನಲ್ಲಿಯೂ, ಉಳ್ಳಾಲ, ಮಂಗಳೂರು, ಸುರತ್ಕಲ್ ವ್ಯಾಪ್ತಿಯ ತಂಡಕ್ಕೆ ಮಂಗಳೂರಿನ ಪಡೀಲ್ ನಲ್ಲಿರುವ ಇಲ್ಮ್ ಸೆಂಟರ್ ನಲ್ಲಿಯೂ ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ಆರೋಗ್ಯ ವೈದ್ಯಾಧಿಕಾರಿ ಡಾ.ನವೀನ್, ಪ್ರಾಥಮಿಕ ಆರೋಗ್ಯ ವೈದ್ಯಾಧಿಕಾರಿ ಡಾ.ಜಯಪ್ರಕಾಶ್,ಎಸ್ಸೆಸ್ಸೆಫ್ ರಾಜ್ಯ ಸುಪ್ರೀಂ ಕೌನ್ಸಿಲ್ ನಾಯಕ ಜಿ.ಎಂ.ಎಂ.ಕಾಮಿಲ್ ಸಖಾಫಿ, ಮುಹಿಮ್ಮಾತ್ ಮುದರ್ರಿಸ್ ಅಬ್ದುಲ್ ಅಝೀಝ್ ಮಿಸ್ಬಾಹಿ, ಜಿಲ್ಲಾ ಕಾರ್ಯದರ್ಶಿ ರಶೀದ್ ಹಾಜಿ ವಗ್ಗ, ಜಿಲ್ಲಾ ನಾಯಕರಾದ ನವಾಝ್ ಸಖಾಫಿ ಅಡ್ಯಾರ್, ಎ.ಎಂ.ಫೈಝಲ್ ಝುಹ್ರಿ ಕಲ್ಲುಗುಂಡಿ,ಇಲ್ಯಾಸ್ ಪೊಟ್ಟೊಳಿಕೆ, ಮುಂತಾದವರು ತರಬೇತಿಯನ್ನು ನಡೆಸಿಕೊಟ್ಟರು.


ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ, ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ, ಕೋಶಾಧಿಕಾರಿ ಅಲಿ ತುರ್ಕಳಿಕೆ,ಜಿಲ್ಲಾ ನಾಯಕರಾದ ಖುಬೈಬ್ ತಂಙಳ್, ಹಕೀಂ ಕಳೆಂಜಿಬೈಲು, ಯು.ಪಿ.ಮುಸ್ತಪಾ,ಹಾಗೂ ನಾಲ್ಕು ಸೆಂಟರ್ ಗಳಲ್ಲಿ ಆಯ್ದ ಸೇವಾ ತಂಡದ ಸೇವಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್