ಬೆಂಗಳೂರು: ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಹೆಚ್ಚಾಗುತ್ತಿರುವ ರಾಜ್ಯವನ್ನು ಕೋವಿಡ್-19 ಸಾಂಕ್ರಾಮಿಕ ರೋಗದಿಂದ ದೇವರೇ ಕಾಪಾಡಬೇಕು ಎಂಬ ಆರೋಗ್ಯ ಸಚಿವ ಶ್ರೀರಾಮುಲು ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ.
ಆರೋಗ್ಯ ಸಚಿವರ ಹೇಳಿಕೆ ವಿರೋಧಿಸಿ ರಾಜ್ಯಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,ರಾಜ್ಯವನ್ನು ದೇವರೇ ಕಾಪಾಡಬೇಕು ಎಂದು ಆರೋಗ್ಯ ಸಚಿವರು ಹೇಳುತ್ತಿರುವುದು ಕೋವಿಡ್ ಬಿಕ್ಕಟ್ಟು ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರದ ವೈಫಲ್ಯವನ್ನು ತೋರಿಸುತ್ತಿದೆ. ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಆಗದಿದ್ದರೆ ಇಂತಹ ಸರ್ಕಾರ ನಮಗೆ ಏಕೆ ಬೇಕು ಎಂದು ಪ್ರಶ್ನಿಸಿದ್ದಾರೆ.
ಈ ಸರ್ಕಾರದ ಅಸಮರ್ಥತೆಯು ನಾಗರಿಕರನ್ನು ದೇವರ ಕರುಣೆಗೆ ಬಿಟ್ಟಿದೆ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಆದಾಗ್ಯೂ, ಜನರು ಸಹಕಾರ ನೀಡಿದರೆ ಮಾತ್ರ ದೇವರು ನಮ್ಮನ್ನು ಕಾಪಾಡಲು ಸಾಧ್ಯ ಎಂಬರ್ಥದಲ್ಲಿ ಹೇಳಿಕೆ ನೀಡಿರುವುದಾಗಿ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ