ಬೆಂಗಳೂರು:ಸಿಇಟಿ ಪರೀಕ್ಷೆಯು ಜುಲೈ 30, ಆಗಸ್ಟ್ 1ರಂದು ನಿಗದಿಯಾಗಿದ್ದು ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ನಿಗದಿಯಾಗಿರುವ ಸಿಇಟಿ ಪರೀಕ್ಷೆ ನಡೆಸುವ ಸಂಬಂಧ ನಿರ್ಧಾರವನ್ನು ಮರುಪರಿಶೀಲಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಕೊರೋನಾವಿರುವ ಕಂಟೈನ್ಮೆಂಟ್ ಜೋನ್ ಗಳಲ್ಲಿರುವವರು ಹೊರ ಹೋಗುವಂತಿಲ್ಲ. ಅಲ್ಲದೆ ಹೊರರಾಜ್ಯಗಳಿಂದ ಬಂದೂ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಾರೆ. ಕೊರೊನಾ ಎಸ್ಓಪಿಯ ಅನುಸಾರ ಕಂಟೈನ್ಮೆಂಟ್ ಜೋನ್ ನಲ್ಲಿರುವವರು ಹೊರಗೆ ಹೋಗುವಂತಿಲ್ಲ. ಬೆಂಗಳೂರಿನಲ್ಲೇ ಮೂರು ಸಾವಿರದಷ್ಟು ಕಂಟೈನ್ಮೆಂಟ್ ಜೋನ್ ಗಳಿದೆ. ಹಾಗಾಗಿ ಅಲ್ಲಿನ ವಿದ್ಯಾರ್ಥಿಗಳು ಎಲ್ಲಿ ಹೋಗುತ್ತಾರೆ? ಅವರು ಪರೀಕ್ಷೆಯಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದಿರುವ ಹೈಕೋರ್ಟ್ ಪರೀಕ್ಷೆ ನಡೆಸುವ ನಿರ್ಧಾರವನ್ನು ಮರುಪರಿಶೀಲಿಸಿ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ವಕೀಲರಾದ ಎಸ್.ಪಿ. ಪ್ರದೀಪ್ ಕುಮಾರ್ ಹಾಗೂ ಎಸ್. ಹನುಮಂತೇಗೌಡ ಎನ್ನುವವರು ಈ ಸಂಬಂಧ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ನ್ಯಾಯಪೀಠ ನಿರ್ಧಾರದ ಮರುಪರಿಶೀಲನೆಗೆ ಸೂಚಿಸಿದ್ದು ಬುಧವಾರ ಮಧ್ಯಾಹ್ನ 2:30ರೊಳಗೆ ಉತ್ತರಿಸುವಂತೆ ಹೇಳಿ ವಿಚಾರಣೆ ಮುಂದೂಡಿದೆ.
ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಸಿಇಟಿ ಪರೀಕ್ಷೆಯನ್ನು ಮುಂದೂಡುವಂತೆ ಸಾಮಾಜಿಕ ತಾಣದಲ್ಲಿ ಆಗ್ರಹ ವ್ಯಕ್ತವಾಗಿದ್ದು, ಟ್ವಿಟರ್ ನಲ್ಲಿ ಟ್ರೆಂಡಿಂಗ್ ಆಗಿತ್ತು.















ಇನ್ನಷ್ಟು ಸುದ್ದಿಗಳು
ನಾಳೆಯಿಂದ ಎಸ್ಸೆಸ್ಸೆಫ್ ಕ್ಯಾಂಪಸ್ ಕಾನ್ಫರೆನ್ಸ್ – ಎಲ್ಲರ ಚಿತ್ತ ಮೈಸೂರಿನತ್ತ!
ನಂದಾವರ ಕೋಟೆ: ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಬಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ
ಶಾಜ್ಮಿಯ ಡಿಸ್ಟಿಂಕ್ಷನ್ (557) ಅಂಕದೊಂದಿಗೆ ತೇರ್ಗಡೆ
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ. 73.40 ವಿದ್ಯಾರ್ಥಿಗಳು ಉತ್ತೀರ್ಣ- ಬಾಲಕಿಯರೇ ಮೇಲುಗೈ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ್ವಿತೀಯ ಪಿಯುಸಿ ಫಲಿತಾಂಶ: 542 ಅಂಕಗಳಿಸಿ ಕಳಂಜಿಬೈಲ್ ಗೆ ಕೀರ್ತಿ ತಂದ ಶಝ್ಮಿಯಾ
ಪಿಯುಸಿ ಕೆಜಿಎನ್ ಶೀ ಕ್ಯಾಂಪಸ್ ಗೆ 100%
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಕಾವೂರು BGS ಫ್ರೌಡಶಾಲೆಯ ವಿದ್ಯಾರ್ಥಿನಿ ಮರಿಯಮ್ ಸಲ್ವಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ