ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕೊಣಾಜೆ ಕ್ಯಾಂಪಸ್‌ನ ಪ್ರಥಮ ದರ್ಜೆ ಕಾಲೇಜನ್ನು ಮುಂದುವರಿಸಲು ತೀರ್ಮಾನಿಸಲಾಗಿದ್ದು, ಈ ವರ್ಷವೂ ವಿದ್ಯಾರ್ಥಿಗಳ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ.
ಸರಕಾರದ ಅನು ಮೋದನೆ ಇಲ್ಲದಿರುವುದು ಹಾಗೂ ಆರ್ಥಿಕ ಹೊರೆ ಕಡಿಮೆಗೊಳಿಸುವ ಉದ್ದೇಶದಿಂದ ಈ ಕಾಲೇಜನ್ನು ಬಂದ್ ಮಾಡಲು ಉದ್ದೇಶಿಸಿಸಲಾಗಿತ್ತು. ಕಾಲೇಜನ್ನು ಬಂದ್ ಮಾಡದಂತೆ ಸಾಮಾಜಿಕ ಮುಖಂಡರ ಸಹಿತ ಹಲವರು ಸರಕಾರವನ್ನು ಆಗ್ರಹಿಸಿದ್ದರು.
ಈ ಬಗ್ಗೆ ಮಾಹಿತಿ ನೀಡಿರುವ ವಿ.ವಿ. ಕುಲಪತಿ ಪ್ರೊ| ಪಿ.ಎಸ್. ಯಡಪಡಿತ್ತಾಯ ಅವರು, “ಕೊಣಾಜೆಯ ಪ್ರ.ದ. ಕಾಲೇಜು ಬಂದ್ ಮಾಡುವ ಬಗ್ಗೆ ವಿ.ವಿ. ಈ ಹಿಂದೆ ಯೋಚಿಸಿತ್ತು. ಆದರೆ ಕೊರೊನಾ ಹಿನ್ನೆಲೆ ಹಾಗೂ ವಿದ್ಯಾರ್ಥಿಗಳು-ಪೋಷಕರಿಗೆ ಸಮಸ್ಯೆ ಆಗಬಾರದು ಎಂಬ ನೆಲೆಯಲ್ಲಿ ಈ ವರ್ಷ ಕಾಲೇಜು ಬಂದ್ ಮಾಡುವುದು ಬೇಡ ಎಂಬ ತೀರ್ಮಾನವನ್ನು ವಿ.ವಿ. ಸಿಂಡಿಕೇಟ್ ಸಭೆ ತೀರ್ಮಾನಿಸಿದೆ. ಸರಕಾರಕ್ಕೆ ಈ ಸಂಬಂಧ ಪತ್ರವನ್ನೂ ಬರೆಯಲಾಗಿದೆ. ಬಂದ್ ಮಾಡದಂತೆ ಉನ್ನತ ಶಿಕ್ಷಣ ಸಚಿವರು ಕೂಡ ದೂರವಾಣಿ ಮೂಲಕ ಸೂಚಿಸಿದ್ದಾರೆ. ಸರಕಾರದಿಂದ ಅಧಿಕೃತ ಪ್ರಕಟನೆ ಇನ್ನಷ್ಟೇ ಬರಬೇಕಿದೆ. ಇದೀಗ ವಿದ್ಯಾರ್ಥಿಗಳ ಸೇರ್ಪಡೆ ಆರಂಭಿಸಲಾಗಿದೆ” ಎಂದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್