ಬೆಳ್ತಂಗಡಿ : ಎಸ್ಸೆಸ್ಸೆಫ್ ಗುರುವಾಯನಕೆರೆ ಸೆಕ್ಟರ್ ವತಿಯಿಂದ, 74 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇದರ ಸಹಯೋಗದೊಂದಿಗೆ ಎಸ್ಸೆಸ್ಸೆಫ್ ದ ಕ ಜಿಲ್ಲಾ ಬ್ಲಡ್ ಸೈಬೋ ಇದರ 171 ನೇ ಬೃಹತ್ ರಕ್ತದಾನ ಶಿಬಿರ ಹಾಗೂ ಅನುಗ್ರಹ ಜನಸೇವಾ ಕೇಂದ್ರ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಅಯುಷ್ಮಾನ್ ಕಾರ್ಡ್ ಅಭಿಯಾನ ಮತ್ತು ಸರಕಾರಿ ಯೋಜನೆಗಳ ಮಾಹಿತಿ ಮತ್ತು ಸೇವೆಯು ಇದೇ ಬರುವ ಆಗಸ್ಟ್ 16 – 2020 ರಂದು ಮನ್ಶರ್ ಕ್ಯಾಂಪಸ್ ಗೇರುಕಟ್ಟೆಯಲ್ಲಿ ನಡೆಯಲಿದೆ.

ಮನ್ಶರ್ ಸಂಸ್ಥೆಯ ಸಾರಥಿ ಎಸ್ಸೆಸ್ಸಫ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಸಯ್ಯಿದ್ ಸಿಟಿಎಂ ಉಮರ್ ಅಸ್ಸಖಾಫ್ ತಂಙಳ್ ಉದ್ಘಾಟನೆ ಮಾಡುವ ಮೂಲಕ ಚಾಲನೆಗೊಳ್ಳುವ ಪ್ರಸ್ತುತ ಕಾರ್ಯಕ್ರಮಕ್ಕೆ ಎಸ್ಸೆಸ್ಸಫ್ ಜಿಲ್ಲಾ, ಝೋನ್, ಡಿವಿಶನ್ ಸಂಘಟನಾ ನಾಯಕರು , ಸಾಮಾಜಿಕ , ಧಾರ್ಮಿಕ , ರಾಜಕೀಯ ನೇತಾರರು ಭಾಗವಹಿಸಲಿದ್ದಾರೆ.
ಲಾಕ್ ಡೌನ್ ಸಮಸ್ಯೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಎಲ್ಲರೂ ಸ್ವಯಂ ಪ್ರೇರಿತರಾಗಿ ಬಂದು ರಕ್ತದಾನ ಮಾಡುವುದರ ಮೂಲಕ ಹನಿ ರಕ್ತಕ್ಕಾಗಿ ಅಂಗಲಾಚಿಸುವವರಿಗೆ ಆಸರೆಯಾಗುವ ಈ ಕಾರ್ಯಕ್ರಮವನ್ನು ಯಶಸ್ವೀ ಗೊಳಿಸಬೇಕಾಗಿ ಎಸ್ಸೆಸ್ಸೆಫ್ ಗುರುವಾಯನಕೆರೆ ಸೆಕ್ಟರ್ ಅಧ್ಯಕ್ಷರಾದ ಬಹು ಜಮಾಲ್ ಮದನಿ ಉಸ್ತಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ನಾಸಿರ್ ಎನ್ ಜಾರಿಗೆಬೈಲ್















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ