ಬೆಂಗಳೂರು: ಪ್ರವಾದಿ ನಿಂದನೆಯ ಫೇಸ್‌ಬುಕ್ ಪೋಸ್ಟ್ ಹಾಗೂ ಹಿಂಸಾಚಾರಗಳೆರಡೂ ಖಂಡನಾರ್ಹ ಎಂದು ಎಸ್ಸೆಸ್ಸೆಫ್ ರಾಜ್ಯ ಸಮಿತಿ ಅಭಿಪ್ರಾಯಪಟ್ಟಿದೆ.
ಸೋಷಿಯಲ್ ಮೀಡಿಯಾಗಳಲ್ಲಿ ಕೋಮುಪ್ರಚೋದಕ ಪೋಸ್ಟ್ ಹಂಚುವ ಮೂಲಕ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಯಾರೇ ಆದರೂ ಶಿಕ್ಷಾರ್ಹರು. ಅದೇ ರೀತಿ ಕಾನೂನು ಕೈಗೆತ್ತಿಕೊಂಡು ಹಿಂಸಾಚಾರಕ್ಕಿಳಿಯುವುದು ಕೂಡ ವಿಶ್ವ ಪ್ರವಾದಿಯವರ ಬೋಧನೆಗೆ ಮಸಿಬಳಿಯುವ ಪ್ರಯತ್ನವಾಗಿದೆ.
ಯಾರದೇ ಪ್ರಚೋದನಾತ್ಮಕ ಹೇಳಿಕೆಗಳಿಗೆ ವಿವೇಕಯುತವಾಗಿ ಪ್ರತಿಕ್ರಿಯಿಸಬೇಕು. ಹಿಂಸಾತ್ಮಕವಾಗಿ ವರ್ತಿಸಿದರೆ ಪ್ರಚೋದಿಸಿದರ ದುರುದ್ದೇಶ ಇಡೇರುತ್ತದೆ. ಇದಕ್ಕೆ ಯಾರೂ ಅವಕಾಶ ಕೊಡಬಾರದು ಎಂದು ಎಸ್ಸೆಸ್ಸೆಫ್ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಈ ಹಿಂದೆಯೂ ಕೆಲವು ದುಷ್ಕರ್ಮಿಗಳು ಅನಗತ್ಯವಾಗಿ ಪ್ರವಾದಿಯವರನ್ನು ಅವಮಾನಕರವಾಗಿ ಚರ್ಚೆಗೆ ಎಳೆದು ತರುವ ಪ್ರಯತ್ನವನ್ನು ಮಾಡಿದ್ದರು. ಅಂತಹ ದುಷ್ಕರ್ಮಿಗಳ ವಿರುದ್ಧ ಇನ್ನೂ ಕ್ರಮ ಕೈಗೊಳ್ಳದಿರುವುದು ಖೇದಕರ. ಇನ್ನು ಇಂತಹ ದುಷ್ಕೃತ್ಯಗಳು ಪುನರಾವರ್ತನೆಯಾಗದಂತೆ ರಾಜ್ಯ ಗೃಹ ಇಲಾಖೆಯು ಎಚ್ಚರ ವಹಿಸಬೇಕು ಎಂದು ಎಸ್ಸೆಸ್ಸೆಫ್ ಪ್ರಕಟನೆಯಲ್ಲಿ ಆಗ್ರಹಿಸಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ