ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್, ರಾಜ್ಯಪಾಲೆ ಆನಂದಿ ಬೆನ್ ಪಟೇಲ್, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಗಿಯಾಗಿದ್ದರು.
ನವದೆಹಲಿ: ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಂಡಿದ್ದ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಾಗಿರುವ ಮಹಂತ್ ನೃತ್ಯ ಗೋಪಾಲ್ ದಾಲ್ ಅವರಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿ ತಿಳಿಸಿವೆ. ಅಯೋಧ್ಯೆ ರಾಮಮಂದಿರದ ಭೂಮಿ ಪೂಜೆ ಆಗಸ್ಟ್ 5 ರಂದು ನೆರವೇರಿಸಲಾಗಿತ್ತು. ಕಾರ್ಯಕ್ರಮದಲ್ಲಿ ಐವರು ಪ್ರಮುಖ ನಾಯಕರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಐವರಲ್ಲಿ ಮಹಂತ್ ನೃತ್ಯ ಗೋಪಾಲ್ ದಾಸ್ ಕೂಡ ಒಬ್ಬರಾಗಿದ್ದರು.

ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್, ರಾಜ್ಯಪಾಲೆ ಆನಂದಿ ಬೆನ್ ಪಟೇಲ್, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಗಿಯಾಗಿದ್ದರು. ಇದೀಗ ಮಹಂತ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಈ ನಡುವೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ತ್ವರಿಗತಿ ವೈದ್ಯಕೀಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ