ಮಂಗಳೂರು : SKSSF ವಿಖಾಯ ರಕ್ತದಾನಿ ಬಳಗ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಜಿಲ್ಲೆಯಾದ್ಯಂತ ರಕ್ತದಾನ ಅಭಿಯಾನ ಆಗಸ್ಟ್ 19 ರಿಂದ ಅಕ್ಟೋಬರ್ 2 ರವರೆಗೆ ನಡೆಯಲಿದೆ. ಸುಮಾರು 12 ವಲಯಗಳಲ್ಲಿ ಹಾಗೂ 20 ಕ್ಕಿಂತ ಅಧಿಕ ರಕ್ತದಾನ ಕ್ಯಾಂಪ್ ಗಳು ನಡೆಯಲಿದ್ದು ತುರ್ತು ಸಂಧರ್ಭಗಳಲ್ಲಿ ಜಿಲ್ಲೆಯ ಎಲ್ಲಾ ಬ್ಲಡ್ ಬ್ಯಾಂಕುಗಳಲ್ಲಿ ಕೂಡ ವಿಖಾಯ ಕಾರ್ಯಕರ್ತರು ರಕ್ತದಾನ ಮಾಡಲಿದ್ದಾರೆ.
ರಕ್ತದಾನ ಅಭಿಯಾನದ ಉದ್ಘಾಟನಾ” ಕಾರ್ಯಕ್ರಮವು ಮಂಗಳೂರು ವಲಯ SKSSF ವಿಖಾಯ ರಕ್ತದಾನಿ ಬಳಗದ ನೇತೃತ್ವದಲ್ಲಿಆಗಸ್ಟ್ 19 ರಂದು ವಲಚ್ಚಿಲ್ ದರ್ಗಾ ಷರೀಫ್ ಸಭಾಂಗಣದಲ್ಲಿ ನಡೆಯಲಿದೆ. SKSSF ದ.ಕ ಜಿಲ್ಲಾದ್ಯಕ್ಷರಾದ ಅಮೀರ್ ತಂಙಳ್ ಕಿನ್ಯಾ ಕಾರ್ಯಕ್ರಮದಲ್ಲಿ ದುಅ ವನ್ನು ನೆರವೇರಿಸಲಿದ್ದಾರೆ ಕಾರ್ಯಕ್ರಮದ ಉದ್ಘಾಟನೆಯನ್ನು ವಳಚ್ಚಿಳ್ ಖತೀಬರಾದ ಕುಕ್ಕಿಲ ದಾರಿಮಿ ಉಸ್ತಾದರು ನಡೆಸಲಿದ್ದಾರೆ.ಎಸ್ಕೆಎಸ್ಸೆಸ್ಸೆಪ್ ಕರ್ನಾಟಕ ರಾಜ್ಯಾದ್ಯಕ್ಷರಾದ ಅನೀಸ್ ಕೌಸರಿ ಉಸ್ತಾದರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.
ಜಿಲ್ಲಾ ವಿಖಾಯ ಚೇರ್ಮೆನ್ ಇಸ್ಮಾಯಿಲ್ ತಂಙಳ್ ಮುಖ್ಯ ಅತಿಥಿಗಳಾಗಿ ಬಾಗವಹಿಸುವ ಈ ರಕ್ತದಾನ ಅಭಿಯಾನದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಖಾಯ ರಕ್ತದಾನಿ ಬಳಗದ ಉಸ್ತುವಾರಿ ತಾಜುದ್ದೀನ್ ಟರ್ಲಿ ಹಾಗೂ ಮಂಗಳೂರು ವಲಯ ಉಸ್ತುವಾರಿ ನಝೀರ್ ವಲಚ್ಚಿಲ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ