ಮುಡಿಪು (ಆ 24): ಸರಕಾರಿ ಆಸ್ಪತ್ರೆ ಬಲಪಡಿಸಲು, ಖಾಸಗೀ ಆಸ್ಪತ್ರೆ ನಿಯಂತ್ರಿಸಲು, ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಹಾಗು ಕೊರೋನಾ ಹೆಸರಲ್ಲಿ ಆಸ್ಪತ್ರೆಗಳ ಲೂಟಿಕೋರ ನೀತಿಯನ್ನು ಖಂಡಿಸಿ, ಸರಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನು ವಿರೋಧಿಸಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಬಲಪಡಿಸುವಂತೆ ಒತ್ತಾಯಿಸಿ, ಎಲ್ಲರಿಗೂ ಸಮಾನ ಗುಣಮಟ್ಟದ ಉಚಿತ ಚಿಕಿತ್ಸೆಗಾಗಿ ಒತ್ತಾಯಿಸಿ ಇಂದು ಡಿವೈಎಫ್ಐ ಮೊಂಟೆಪದವು ಹಾಗೂ ಕೊಲ್ಲರಕೋಡಿ ಘಟಕಗಳ ನೇತೃತ್ವದಲ್ಲಿ ನರಿಂಗಾನ ಗ್ರಾಮ ಪಂಚಾಯತ್ ಕಚೇರಿ ಎದುರು ಇಂದು ಭಿತ್ತಿಪತ್ರ ಪ್ರದರ್ಶನ ನಡೆಸಿ ಮನವಿ ಸಲ್ಲಿಸಲಾಯಿತು.

ಸಭೆಯನ್ನುದ್ದೇಶಿಸಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯ ಅಧ್ಯಕ್ಷ ಅಶ್ರಫ್ ಕೆಸಿ ರೋಡ್ ಮಾತನಾಡಿದರು. ಸಭೆಯಲ್ಲಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಉಪಾಧ್ಯಕ್ಷ ರಝಾಕ್ ಮೊಂಟೆಪದವು, ಎಸ್.ಎಫ್.ಐ ಜಿಲ್ಲಾ ಉಪಾಧ್ಯಕ್ಷ ಶಮಾಸ್ ಕೆಸಿ ರೋಡ್ , ಡಿವೈಎಫ್ಐ ಮೊಂಟೆಪದವು ಘಟಕದ ಅಧ್ಯಕ್ಷ ಸಿರಾಜ್ ಬಿ.ಎಂ, ಕೊಲ್ಲರಕೋಡಿ ಘಟಕದ ಅಧ್ಯಕ್ಷ ಆಸಿಫ್ ಕೊಲ್ಲರಕೋಡಿ, ಶರೀಫ್ ವಿದ್ಯಾನಗರ, ಅಶ್ರಫ್ ಅಚ್ಚು ಸಾರ್ಥಬೈಲ್, ಹಿದಾಯತ್ ಮೊಂಟೆಪದವು,ಯೂಸುಫ್, ನಿಝಮ್, ಸಾಹಿಲ್, ನಾಸಿರ್ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್