ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್ ಮಾಡಿದ ವ್ಯಕ್ತಿಯನ್ನು ಪೊಲೀಸರು ಆಗಸ್ಟ್ 24 ರ ಸೋಮವಾರ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಬಂಧಿತ ಆರೋಪಿ ಬಾರ್ಯ ಪುತ್ತಿಲ ಗ್ರಾಮದ ರಘುರಾಮು ಶೆಟ್ಟಿ ಎಂದು ಗುರುತಿಸಿದ್ದು ಸಂಬಂಧಿಯೊಬ್ಬರ ನಿವಾಸದಲ್ಲಿ ಆರೋಪಿ ಆಶ್ರಯ ಪಡೆದಿರುವ ಬಗ್ಗೆ ವಿಶ್ವಾಸಾರ್ಹ ಮಾಹಿತಿ ಪಡೆದ ಬೆಳ್ತಂಗಡಿ ಪೋಲೀಸರು ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ ಜಿ, ನೇತೃತ್ವದಲ್ಲಿ ಅಲ್ಲಿಗೆ ತೆರಳಿ ಬಂದ್ಜಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಪೂಜೆಯ ಸಂದರ್ಭದಲ್ಲಿ ಆಗಸ್ಟ್ 5 ರಂದು ರಘುರಾಮು ಶೆಟ್ಟಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾನೆ ಮತ್ತು ಪಟಾಕಿಗಳನ್ನು ಸಿಡಿಸಿದ್ದಾನೆ ಎಂದು ಆರೋಪಿಸಿ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ನಂತರ, ಆತ ವಾಟ್ಸಪ್ ನಲ್ಲಿ ಪೋಸ್ಟ್ ಮಾಡಿದ್ದು, ಯಾರೂ ತನಗೆ ಏನೂ ಮಾಡಲಾರರು ಎಂದು ಹೇಳಿಕೊಂಡ ಶೆಟ್ಟಿ ಬೇರೊಂದು ಸಮುದಾಯದವರನ್ನು ಬಾಂಬ್ ಸಿಡಿಸಿ ನಾಶಗೊಳಿಸಬೇಕು ಎಂದು ಪೋಸ್ಟ್ ಹಾಕಿದ್ದ. ಈ ಸಂದೇಶದ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿಲಾಗಿತ್ತು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್