ನವದೆಹಲಿ: ಜೀವ ವಿಮಾ ಕಾರ್ಪೊರೇಷನ್ (ಎಲ್ಐಸಿ) ಶೇ.25ರಷ್ಟು ಷೇರನ್ನು ಮಾರಾಟ ಮಾಡುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರಿ ಕಂಪನಿಗಳನ್ನು ಮಾರಾಟ ಮಾಡುವ ಅಭಿಯಾನ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
“ಮೋದಿ ಜಿ ಅವರು ಸರ್ಕಾರಿ ಕಂಪನಿಗಳನ್ನು ಮಾರಾಟ ಮಾಡುವ ಅಭಿಯಾನ ನಡೆಸುತ್ತಿದ್ದಾರೆ. ಸ್ವಯಂ ಅಪರಾಧದಿಂದ ಉಂಟಾಗಿರುವ ಆರ್ಥಿಕ ಕುಸಿತವನ್ನು ಮುಚ್ಚಿಹಾಕಲು ಸರ್ಕಾರದ ಆಸ್ತಿಯನ್ನು ಒಂದರ ನಂತರ ಒಂದರಂತೆ ಮಾರಾಟ ಮಾಡಲಾಗುತ್ತಿದೆ. ಜನರ ಭವಿಷ್ಯ ಮತ್ತು ನಂಬಿಕೆಯನ್ನು ಅಪಾಯಕ್ಕೊಡ್ಡಿ ಎಲ್ಐಸಿಯನ್ನು ಮಾರಾಟ ಮಾಡುವುದು ಮೋದಿ ಸರ್ಕಾರದ ಇನ್ನೊಂದು ನಾಚಿಕೆಗೇಡಿನ ಪ್ರಯತ್ನ” ಎಂದು ಕಿಡಿಕಾರಿದ್ದಾರೆ.
ಜೊತೆಗೆ ರಾಹುಲ್, ಎಲ್ಐಸಿಯ ಶೇ.25ರಷ್ಟು ಷೇರುಗಳನ್ನು ಮಾರಾಟ ಮಾಡುವ ಸರ್ಕಾರದ ಯೋಜನೆ ಕುರಿತ ವರದಿಗಳನ್ನು ಕೂಡ ಟ್ವಿಟರ್ನಲ್ಲಿ ಲಗತ್ತಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ
ಪರೀಕ್ಷೆಗೂ ಹಿಜಾಬ್ ಗೂ ಸಂಬಂಧವಿಲ್ಲ- ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ
ಜನಾದೇಶವಿಲ್ಲದೆ ಬಿಜೆಪಿಗೆ ಗೆಲುವು: ಇದು ಇವಿಎಂ ದುರ್ಬಳಕೆ- ಸಂಘಟಿತ ಹೋರಾಟಕ್ಕೆ ಕಾಂಗ್ರೆಸ್ಗೆ ದೀದಿ ಆಹ್ವಾನ