ಬೆಂಗಳೂರು,ಸೆ. 11: ರಾಜ್ಯದೆಲ್ಲೆಡೆ ಮೂರ್ನಾಲ್ಕು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಇಂದು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡದಲ್ಲಿ ಬೆಳಗ್ಗೆಯಿಂದಲೇ ಮಳೆ ಶುರುವಾಗಿದೆ.
ಕರಾವಳಿಯಲ್ಲಿ ಇಂದು ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಹೆಚ್ಚಾಗಲಿದೆ. ಎರಡು -ಮೂರು ದಿನಗಳಿಂದ ರಾಜ್ಯದ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಹಾಗೂ ಮತ್ತೆ ಕೆಲವೆಡೆ ಭಾರೀ ಮಳೆಯಾದ ವರದಿಯಾಗಿದೆ. ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಳೆಗೆ ಪೂರಕವಾದ ಸನ್ನಿವೇಶ ಸೃಷ್ಟಿಯಾಗಿದ್ದು, ಇದೇ ರೀತಿ ಮಳೆ ಮುಂದುವರೆಯಲಿದೆ.
ಮುಂದಿನ ಎರಡು ದಿನಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಗಳಿವೆ. ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಜುಲೈ ತಿಂಗಳಲ್ಲಿ ಅಬ್ಬರಿಸಿದ ಮಳೆ ಬಳಿಕ ಕಡಿಮೆಯಾಗಿತ್ತು. 15ರಿಂದ 20 ದಿನಗಳಿಂದ ಇಳಿಮುಖವಾಗಿದ್ದ ಮಳೆ ಮತ್ತೆ ಹೆಚ್ಚಾಗಿದೆ. ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಪುತ್ತೂರು ಅಶ್ರಫ್ ಕಲ್ಲೇಗರಿಗೆ ಐದು ಲಕ್ಷ ಬಾಂಡ್ ಮುಚ್ಚಳಿಕೆ ಕೋರಿ ನೋಟೀಸು ಆಘಾತಕಾರಿ ಮುನೀರ್ ಕಾಟಿಪಳ್ಳ
ಪೆನ್ನು ಹಿಡಿಯುವ ಕೈಗಳು ಗಾಂಜಾ, ಚೂರಿ ಹಿಡಿಯುತ್ತಿದೆ: ಪೋಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು-ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್
ದಕ ಜಿಲ್ಲಾ ವಕ್ಪ್ ನಿಂದ ಶಾಸಕ ಐವನ್ ಡಿ ಸೋಜ ರಿಗೆ ಅಭಿನಂದನಾ ಸಮಾರಂಭ
ಭಾರಿ ಮಳೆ: ದ.ಕ ಜಿಲ್ಲಾ ಶಾಲೆಗಳಿಗೆ ನಾಳೆ ರಜೆ- ಜಿಲ್ಲಾಧಿಕಾರಿ ಘೋಷಣೆ
ಜಾತಿ ಮದ್ಯೆ ವೀಷ ಬೀಜ ಬಿತ್ತುತ್ತಿರುವ ಶಾಸಕನನ್ನು ಕೇಸು ದಾಖಲಿಸಿ ಕೂಡಲೇ ಬಂದಿಸಬೇಕು ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಮಿಷನರ್ ಗೆ ದೂರು
ಸುಮೊಟೊ ದುರ್ಬಳಕೆಯಾಗುತ್ತಿರುವ ಆತಂಕವಿದೆ- ಎಸ್ಸೆಸ್ಸೆಫ್
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಕಾಣಿಯೂರು ಹಲ್ಲೆ ಪ್ರಕರಣ: ಯು.ಟಿ ಖಾದರ್ ಖಂಡನೆ- ಗೃಹ ಸಚಿವರೊಂದಿಗೆ ಮಾತುಕತೆ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್