ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಯಾಕೂಬ್ ಕೊಯ್ಯುರು ರವರಿಗೆ ಸನ್ಮಾನ ಕಾರ್ಯಕ್ರಮ
ಬೆಳ್ತಂಗಡಿ, ಸೆ. 13 :- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುನ್ನತ್ ಕೆರೆ ಬ್ರಾಂಚ್ ಇದರ ವತಿಯಿಂದ ರಕ್ತದಾನ ಶಿಬಿರ ಹಾಗೂ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಯಾಕೂಬ್ ಕೊಯ್ಯುರು ರವರಿಗೆ ಸನ್ಮಾನ ಕಾರ್ಯಕ್ರಮ ಇಂದು ಸುನ್ನತ್ ಕೆರೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ಬೆಳ್ತಂಗಡಿ ವಿಧಾನಸಭಾ ಅಧ್ಯಕ್ಷರಾದ ಹೈದರ್ ನಿರ್ಸಾಲ್ ರವರು ವಹಿಸಿದ್ದರು.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಅಧ್ಯಕ್ಷರಾದ ಮುಸ್ತಫಾ ಜಿ.ಕೆ., ಎಸ್ ಡಿ ಪಿ ಐ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿಯಾದ ಅಲ್ಫೊಂಸ್ ಫ್ರಾಂಕೋ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಸುಮಾರು 90 ರಷ್ಟು ಜನರು ರಕ್ತದಾನ ಮಾಡಿ ಸಹಕರಿಸಿದರು.

ವೇದಿಕೆಯಲ್ಲಿ ಎಸ್ ಡಿ ಪಿ ಐ ಕುವೆಟ್ಟು ಗ್ರಾಮ ಸಮಿತಿ ಅಧ್ಯಕ್ಷ ರಾದ ದಾವುದ್ ಜಿ.ಕೆ., SDPi ಜಿಲ್ಲಾ ಸಮಿತಿ ಸದಸ್ಯರಾದ ಅಕ್ಬರ್ ಬೆಳ್ತಂಗಡಿ, ಅಶ್ರಫ್ ಅಲಿಕುಂಙ್ಞ ಅಧ್ಯಕ್ಷರು ಪತ್ರಕರ್ತರ ಸಂಘ ಬೆಳ್ತಂಗಡಿ, ಯಾಕೂಬ್ ಕೊಯ್ಯುರ್ ಅಧ್ಯಾಪಕರು ನಡ ಶಾಲೆ, ಅಲ್ ಮಸ್ಜಿದುಲ್ ಹುದಾ ಜುಮ್ಮಾ ಮಸ್ಜಿದ್ ಸುನ್ನತ್ ಕೆರೆ ಇದರ ಅಧ್ಯಕ್ಷರಾದ ಹಾಜಿ ಅಬ್ದುಲ್ ರಹ್ಮಾನ್, ನಿವ್ರತ ಕ.ರ.ರಾ.ಸಾ.ನಿ. ಉದ್ಯೋಗಿ ಎಮ್.ಡಿ.ಸ್ವಾದಿಕ್ ಸಾಹೇಬ್ ಸುನ್ನತ್ ಕೆರೆ, ಡಾ || ಝೈನುದ್ದೀನ್ ತಙ್ಞರು B.A.M.S. M.D. ಆಯುರ್ವೇದ, ನಾರಾಯನ್ ಕುಲಾಲ್ ಗ್ರಾಮ ಕರಣಿಕರು ಕುವೆಟ್ಟು ಗ್ರಾಮ ಸಮಿತಿ ಹಾಗೂ ಇನ್ನಿತರ ನಾಯಕರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಎಸ್ ಡಿ ಪಿ ಐ ಪಾಡ್ಯಾರು ಬ್ರಾಂಚ್ ಅಧ್ಯಕ್ಷ ಕಲಂದರ್ ಅಂಗಡಿ ಸ್ವಾಗತಿಸಿ ನಿಸಾರ್ ಸುನ್ನತ್ ಕೆರೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್