ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ಅಂತಾರಾಷ್ಟ್ರೀಯ ಸಮಿತಿ ವತಿಯಿಂದ “Resurgence-20″ ಕಾರ್ಯಕ್ರಮವು ಸೆ.18 ರಂದು Zoom App ನಲ್ಲಿ ನಡೆಯಲಿದೆ.
ಭಾರತೀಯ ಕಾಲಮಾನ ರಾತ್ರಿ 9.30ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕೇರಳ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಬದ್ರುಸ್ಸಾದಾತ್ ಅಸ್ಸಯ್ಯಿದ್ ಇಬ್ರಾಹೀಮುಲ್ ಖಲೀಲ್ ಅಲ್-ಬುಖಾರಿ ತಂಙಳ್ ರವರು ಉಪನ್ಯಾಸ ನೀಡಲಿದ್ದಾರೆ.
ಕೊಡಗು ಜಿಲ್ಲಾ ಸಹಾಯಕ ಖಾಝಿಯವರಾದ ಬಹು| ಕೆ.ಎ.ಮಹ್ಮೂದ್ ಮುಸ್ಲಿಯಾರ್ ಎಡಪ್ಪಾಲ ಇವರ ದುಆದೊಂದಿಗೆ ಆರಂಭಗೊಳ್ಳಲಿರುವ ಕಾರ್ಯಕ್ರಮವನ್ನು ಕರ್ನಾಟಕ ಜಮ್ಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಬಹು| ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದರು ಉದ್ಘಾಟಿಸಲಿದ್ದಾರೆ.

ಕೋವಿಡ್ ಕಾಲದಲ್ಲಿ ಹಲವರ ಕೆಲಸಗಳು ನಷ್ಟವಾಗಿದ್ದು, ಇನ್ನು ಕೆಲವರು ಆರ್ಥಿಕವಾಗಿ ಬಹುದೊಡ್ಡ ನಷ್ಟದಲ್ಲಿದ್ದಾರೆ. ಈ ಸಂದಿಗ್ಧ ಪರಿಸ್ಥಿತಿಯನ್ನು ನಿಭಾಯಿಸಲು ಉಲಮಾ ನಾಯಕರ ಸಲಹೆಗಳು ಬಹಳಷ್ಟು ಉಪಕಾರಿಯಾಗಲಿದೆ.
ಧಾರ್ಮಿಕ ನೈತಿಕತೆ ಹಾಗೂ ಆಧ್ಯಾತ್ಮಿಕ ಮರೀಚಿಕೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಸ್ವಸ್ಥ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆದ್ದರಿಂದ ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಕಾರ್ಯಕ್ರಮದ ಕನ್ವೀನರ್ ರಹೀಮ್ ಸಅದಿ ಖತರ್ ಹಾಗೂ ಇಕ್ಬಾಲ್ ಬರಕ ಒಮಾನ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ