ಬೆಳ್ತಂಗಡಿ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ SSF ಬೆಳ್ತಂಗಡಿ ಡಿವಿಷನ್ ವತಿಯಿಂದ “ನೀಡ್-2020” ಡಿವಿಷನ್ ಹಾಗೂ ಸೆಕ್ಟರ್ ನಾಯಕರ ಮೀಟ್ ಹಾಗೂ ರಾಷ್ಟ್ರ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿರುವ ಯಾಕೂಬ್ ಮಾಸ್ಟರ್ ಕೊಯ್ಯೂರು ಇವರಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 17.09.2020ನೇ ಗುರುವಾರ ಮಗ್ರಿಬ್ ನಮಾಝಿನ ಬಳಿಕ ಬೆಳ್ತಂಗಡಿಯ ಸುವರ್ಣ ಆರ್ಕೇಡ್‌ನಲ್ಲಿ ನಡೆಯಿತು. ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ನಝೀರ್ ಮದನಿ ಪೂಂಜಲ್‌ಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ದ.ಕ ಈಸ್ಟ್ ಝೋನ್ ಅಧ್ಯಕ್ಷ ಅಯ್ಯೂಬ್ ಮಹ್ಳರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಇಬ್ರಾಹೀಂ ಸಖಾಫಿ ಸೆರ್ಕಳ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕೋಶಾಧಿಕಾರಿ ಮಹಮ್ಮದ್ ಅಲಿ ತುರ್ಕಳಿಕೆ ಹಾಗೂ ಜಿಲ್ಲಾ ಉಪಾಧ್ಯಕ್ಷ ತೌಸೀಫ್ ಸಅದಿ ಹರೇಕಳ ಅವರು ತರಗತಿ ಮಂಡಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ರಶೀದ್ ಹಾಜಿ ವಗ್ಗ,ಕ್ಯಾಂಪಸ್ ಕಾರ್ಯದರ್ಶಿ ಎಂ.ಶರೀಫ್ ಬೆರ್ಕಳ, ಜಿಲ್ಲಾ ನಾಯಕರಾದ ಇಕ್ಬಾಲ್ ಮಾಚಾರು,ಮುಸ್ತಫಾ ಉರುವಾಲುಪದವು,ಡಿವಿಷನ್ ಹಾಗೂ ಸೆಕ್ಟರ್ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.ಡಿವಿಷನ್ ಪ್ರಧಾನ ಕಾರ್ಯದರ್ಶಿ ಶರೀಪ್ ನಾವೂರು ಸ್ವಾಗತಿಸಿ, ನವಾಝ್ ಮಾವಿನಕಟ್ಟೆ ಧನ್ಯವಾದವಿತ್ತರು.
ವರದಿ : ಎಂ.ಎಂ.ಉಜಿರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ