ದುಬೈ :ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳನ್ನು ಅಕ್ಟೋಬರ್ 2ರವರೆಗೆ ನಿಷೇಧಿಸಿ ‘ದುಬೈ ನಾಗರಿಕ ವಾಯುಯಾನ ಪ್ರಾಧಿಕಾರ’ (ಡಿಸಿಎಎ) ಆದೇಶ ಹೊರಡಿಸಿದೆ.
ಕಳೆದ ಕೆಲವು ವಾರಗಳಲ್ಲಿ ಎರಡು ಬಾರಿ ಕೊರೊನಾ ವೈರಸ್ ಪಾಸಿಟಿವ್ ಸರ್ಟಿಫಿಕೇಟ್ ಹೊಂದಿರುವ ಪ್ರಯಾಣಿಕರನ್ನು ಕರೆತಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದೆ.
ಯುಎಇ ಸರ್ಕಾರದ ಕಾನೂನಿನ ಪ್ರಕಾರ, ಭಾರತದಿಂದ ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರ ಬಳಿ ವಿಮಾನ ಪ್ರಯಾಣ ಆರಂಭಿಸುವ 96ಗಂಟೆಗಳ ಮೊದಲು ಆರ್ ಟಿ-ಪಿಸಿಆರ್ ಮೂಲಕ ಪರೀಕ್ಷೆ ನಡೆಸಿ ಕೊರೊನಾ ವೈರಸ್ ನೆಗೆಟಿವ್ ವರದಿಯ ಒರಿಜಿನಲ್ ಸರ್ಟಿಫಿಕೇಟ್ ಹೊಂದಿರುವುದು ಕಡ್ಡಾಯವಾಗಿದೆ. ಆದರೆ, ಏರ್ ಇಂಡಿಯಾ ಕೊರೊನಾ ಪಾಸಿಟಿವ್ ವ್ಯಕ್ತಿಗಳಿಗೂ ಪ್ರಯಾಣಕ್ಕೆ ಅನುಮತಿ ನೀಡಿರುವ ಆರೋಪ ಮೇಲೆ ನಿಷೇಧಕ್ಕೆ ಒಳಗಾಗಿದೆ.
ಸೆಪ್ಟೆಂಬರ್ 2ರಂದು ಕೋವಿಡ್ 19 ಪಾಸಿಟಿವ್ ಪ್ರಮಾಣ ಪತ್ರ ಹೊಂದಿದ್ದ ವ್ಯಕ್ತಿಯೊಬ್ಬರು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸೆಪ್ಟೆಂಬರ್ 4ರಂದು ಜೈಪುರದಿಂದ ದುಬೈಗೆ ಪ್ರಯಾಣಿಸಿದ್ದರು. ಇಂಥದೇ ಘಟನೆ ಮತ್ತೊಂದು ಏರ್‌ಲೈನ್ಸ್ ವಿಮಾನದಲ್ಲೂ ನಡೆದಿತ್ತು.
ಈ ಎರಡು ಘಟನೆ ನಂತರ ದುಬೈ ನಾಗರಿಕ ವಿಮಾನಯಾನ ಅಧಿಕಾರಿಗಳು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳ ಸಂಚಾರವನ್ನು ಸೆಪ್ಟೆಂಬರ್ 18ರಿಂದ ಅಕ್ಟೋಬರ್ 2ರವರೆಗೆ ರದ್ದುಗೊಳಿಸಿರುವುದಾಗಿ ವಿವರಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್‌ಪ್ರೆಸ್ ಘೋಷಣೆ