ಕೊಪ್ಪಳ : ಭವಿಷ್ಯದಲ್ಲಿ ಭಾರತವನ್ನು ಕಟ್ಟಬೇಕಾದ ಇಂದಿನ ವಿದ್ಯಾರ್ಥಿಗಳಿಗೆ ಅವರು ಸ್ಪರ್ಶಿಸುವ ಎಲ್ಲಾ ಮಜಲುಗಳಲ್ಲೂ ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರನ್ನು ಪರಿಚಯ ಮಾಡಿಕೊಡಬೇಕಾದ ಅನಿವಾರ್ಯತೆ ಇದೆ.
ಮಾದರೀ ಯೋಗ್ಯವಾದ ಚಳವಳಿಗಳ ಮೂಲಕ ನಾಡಿನ ಕಟ್ಟಕಡೆಯ ಪ್ರಜೆಗಳ ಬಗ್ಗೆಯೂ ಕಾಳಜಿ ಹೊಂದಿದ್ದ ಗಾಂದೀಜಿಯವರು ಮಾತ್ರವೇ ಭಾರತದ ರಾಷ್ಟ್ರಪಿತರಾಗಲು ಅರ್ಹರು ಆದ್ದರಿಂದ ಅವರನ್ನು ನೋಟುಗಳಿಗೆ ಅಥವಾ ಪೇಜುಗಳಿಗೆ ಮಾತ್ರ ಸೀಮಿತ ಗೊಳಿಸದೆ ಅವರ ಕನಸನ್ನು ನನಸು ಮಾಡುವಲ್ಲಿ ಸರ್ಕಾರಗಳು ಮುಂದೆ ಬರಬೇಕಾಗಿದೆ ಎಂದು ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ ತಿಳಿಸಿದರು.

‘ಗಾಂಧಿ ವಾಚನ ಭಾರತದ ಪುನಶ್ಚೇತನ’ ಎಂಬ ಘೋಷಣೆಯೊಂದಿಗೆ ಎಸ್ಸೆಸ್ಸೆಫ್ ರಾಷ್ಟ್ರದಾದ್ಯಂತ ಎಲ್ಲಾ ರಾಜ್ಯಗಳಲ್ಲಿ ನಡೆಸಿದ ಕಾರ್ಯಕ್ರಮ ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆಯಿತು.
ರಾಜ್ಯ ಡೆಪ್ಯುಟಿ ಅಧ್ಯಕ್ಷ ಮೌಲಾನಾ ಗುಲಾಂ ಹುಸೈನ್ ನೂರಿ ಅಧ್ಯಕ್ಷತೆ ವಹಿಸಿದರು. ಮಾಜಿ ನಗರಸಭಾ ಅಧ್ಯಕ್ಷ ಶಾಮಿದ್ ಮನಿಯಾರ್ ಸಭೆಯನ್ನು ಉದ್ಘಾಟಿಸಿದರು. ಉಮರುಲ್ ಫಾರೂಖ್ ಕೊಡಗು ಸಂದೇಶ ವಾಚಿಸಿದರು.
ಕರ್ನಾಟಕ ಮುಸ್ಲಿಂ ಜಮಾಅತ್ ಕೊಪ್ಪಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಯ್ಯಿದಲಿ ಸಾಹೇಬ್, ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಮೆಹಬೂಬ್ ಬಸಾಪಟ್ಟಣ, ಎಸ್ ವೈ ಎಸ್ ಜಿಲ್ಲಾಧ್ಯಕ್ಷ ಮೌಲಾನಾ ನಝೀರ್ ಅಹ್ಮದ್, ಎಸ್ಸೆಸ್ಸೆಫ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಫಿಝ್ ಸಲೀಂ ಹಾಗೂ ಇಖ್‌ಬಾಲ್ ಮರ್ಝುಖಿ ಭಾಗವಹಿಸಿದರು.
ನೂರುದ್ದೀನ್ ರಝ್ವಿ ಕಾರ್ಯಕ್ರಮ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ