ಬೆಂಗಳೂರು: ಮಹಾಮಾರಿ ಕೋವಿಡ್ 19 ನಿಯಂತ್ರಣ ರಾಜ್ಯ ಸರ್ಕಾರಕ್ಕೆ ಕಬ್ಬಿಣದ ಕಡಲೆಯಾಗಿದ್ದು ಈ ಹಿನ್ನೆಲೆಯಲ್ಲಿ ಆರೋಗ್ಯ ಖಾತೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಖಾತೆಯನ್ನು ಒಬ್ಬರಿಗೆ ನೀಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಂದಾಗಿದ್ದಾರೆ ಎನ್ನಲಾಗಿದೆ.
ಶ್ರೀರಾಮುಲು ನಿರ್ವಹಿಸುತ್ತಿರುವ ಆರೋಗ್ಯ ಖಾತೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಗೆ ನೀಡಲು ಯಡಿಯೂರಪ್ಪ ನಿರ್ಧರಿಸಿದ್ದು ನಾಳೆ ಅಂತಿಮ ಆದೇಶ ಪ್ರಕಟಣೆ ಸಾಧ್ಯತೆ.
ಕೊರೋನಾ ನಿರ್ವಹಣೆಯಲ್ಲಿ ಸಂವಹನ ಕೊರತೆ ಇದೆ ಎಂಬ ದೂರುಗಳು ಕೇಳಿಬರುತ್ತಿದ್ದು ಹೀಗಾಗಿ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಒಬ್ಬರಿಗೆ ನೀಡಲು ನಿರ್ಧರಿಸಲಾಗಿದೆ. ಇನ್ನು ಸುಧಾಕರ್ ಅವರು ವೈದ್ಯರೂ ಆಗಿರುವುದರಿಂದ ಎರಡು ಖಾತೆಯನ್ನು ಸುಧಾಕರ್ ಅವರಿಗೆ ನೀಡಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಪಿಡಬ್ಲ್ಯೂಡಿ ಜೊತೆಗೆ ಸಮಾಜ ಕಲ್ಯಾಣ ಖಾತೆಯನ್ನು ನಿಭಾಯಿಸುತ್ತಿದ್ದರು. ಇದೀಗ ಸಮಾಜ ಕಲ್ಯಾಣ ಇಲಾಖೆ ಖಾತೆಯನ್ನು ಶ್ರೀರಾಮುಲು ಅವರಿಗೆ ನೀಡಲಾಗುತ್ತದೆ















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ