ಕರೋನಾ ಹಾವಳಿಯಿಂದಾಗಿ ಎಷ್ಟೋ ಕೆಡುಕುಗಳಾದರೂ ಪ್ರತಿಭೆಗಳಿಗಂತೂ ತುಂಬಾನೇ ಒಳಿತುಗಳೇ ಆಗಿಗೆ ಎನ್ನುವುದಕ್ಕೆ ಕಡಬ ತಾಲೂಕಿನ ನೂಜಿಬಾಳ್ತಿದ ಸಮ್ಯಕ್ತ್ ಜೈನ್ ರವರು ಸಾಕ್ಷಿ ಅಂತಾನೇ ಹೇಳಬಹುದು.
ಹೌದು , ಗ್ರಾಮೀಣ ಪ್ರದೇಶದಲ್ಲಿದ್ದುಕೊಂಡು ಅಂತರ್ರಾಜ್ಯ ಮಟ್ಟದಲ್ಲಿ ಸಾಧನೆಗೈಯುತ್ತಿರುವ ಯುವ ಪ್ರತಿಭೆ ಸಮ್ಯಕ್ತ್ ಜೈನ್ ಇದಕ್ಕೆ ಪ್ರತ್ಯಕ್ಷ ಸಾಕ್ಷಿ.
ಇದುವರೆಗೆ ಮೂರು ಕವನಸಂಕಲನವನ್ನು ಬರೆದು – ಪ್ರಕಟಗೊಳಿಸಿ , ಸಾಹಿತ್ಯಿಕ ಚಟುವಟಿಕೆಯಲ್ಲಿ ತಲ್ಲೀನರಾಗಿರುವ ಸಮ್ಯಕ್ತ್ .ಜೈನ್ ರವರಿಗೆ ಇದೀಗ ಮತ್ತೊಂದು ಸಾಧನೆಯ ಗರಿ ಸೇರ್ಪಡೆಗೊಂಡಿದೆ. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಇತ್ತೀಚೆಗೆ , ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಕೃತಿಗಳ ಪರಿಚಯ ಸ್ಪರ್ಧೆ 2020 ಯನ್ನು ಆಯೋಜಿಸಿತ್ತು . ಇದರಲ್ಲಿ ರಾಧೇಶ್ ತೋಳ್ಪಾಡಿರವರು ಬರೆದ ಮಕ್ಕಳ ಕವಿತೆಯ ಕೃತಿಯೊಂದನ್ನು ಪರಿಚಯಿಸಿದ ಇವರು , ಪ್ರಥಮ ಸ್ಥಾನವನ್ನು ಪಡೆದು ಸಂಸ್ಥೆಯಿಂದ ಕೊಡಲ್ಪಡುವ ಪ್ರಶಸ್ತಿ – ಪುರಸ್ಕಾರವನ್ನು ಪಡೆದಿರುತ್ತಾರೆ .
ನೂಜಿಬಾಳ್ತಿಲ , ಹೊಸಂಗಡಿ ಬಸದಿ ಶ್ರೀ ಧರಣೇಂದ್ರ ಇಂದ್ರ ಮತ್ತು ಶ್ರೀಮತಿ ಮಂಜುಳಾರವರ ಸುಪುತ್ರರಾಗಿರುವ ಇವರು ಕವಿ ,ಲೇಖಕ ,ನಾಟಕ ರಚನೆಗಾರ, ಯುವ ಚಿಂತಕ,ನಿರೂಪಕ, ವಾಗ್ಮಿಯಾಗಿ ಚಿರಪರಿಚಿತಗೊಂಡಿದ್ದು , ತನ್ನ ಸಾಧನೆಯೊಂದಿಗೆ ಊರಿನ ಹೆಸರನ್ನೂ ರಾಜ್ಯ ಮಟ್ಟದಲ್ಲಿ ಮಿಂಚುವಂತೆ ಮಾಡುತ್ತಿದ್ದಾರೆ .















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್