ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದ್ದ 2.5 ಕೆ.ಜಿ ಚಿನ್ನ ನಾಪತ್ತೆಯಾಗಿದೆ. ಈ ಸಂಬಂಧ ಕಸ್ಟಮ್ಸ್ ಜಂಟಿ ಆಯುಕ್ತ ನೀಡಿದ ದೂರಿನ ಮೇರೆಗೆ 5 ಮಂದಿ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ FIR ದಾಖಲಾಗಿದೆ. ಬೆಂಗಳೂರಿನ ಸಿಬಿಐ ಎಸಿಬಿಯಲ್ಲಿ ದೂರು ದಾಖಲಾಗಿದೆ.
ಜೂನ್ 2012- ಡಿಸೆಂಬರ್ 2014 ರವರೆಗೆ ಏರ್ಪೋರ್ಟ್ನಲ್ಲಿ 13 ಪ್ರಕರಣದಲ್ಲಿ ಜಪ್ತಿ ಮಾಡಿದ್ದ ಚಿನ್ನವನ್ನ ಎಂಹೆಚ್ಬಿ ಗೋಡಾನ್ನಲ್ಲಿಡಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಬಿಐಗೆ ದೂರು ನೀಡಲಾಗಿತ್ತು. ಹೀಗಾಗಿ, ಐವರು ಕಸ್ಟಮ್ಸ್ ಅಧಿಕಾರಿಗಳು ಸೇರಿ ಆರು ಜನರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಗೋಡಾನ್ನ ಸೇಫ್ಟಿ ಮತ್ತು ಉಸ್ತುವಾರಿ ಅಧಿಕಾರಿಗಳ ವಿರುದ್ಧ ದೂರು ನೀಡಲಾಗಿತ್ತು. ಅಕ್ಟೋಬರ್ 12ರಂದು ಸಿಬಿಐ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದೆ.
ಕಸ್ಟಮ್ಸ್ ಮತ್ತು ಕೇಂದ್ರ ಅಬಕಾರಿ ಸಹಾಯಕ ಆಯುಕ್ತರಾದ ವಿನೋದ್ ಚಿನ್ನಪ್ಪ, ಕೆ. ಕೇಶವ್, ಸೂಪರಿಂಟೆಂಡೆಂಟ್ ಎನ್.ಜೆ. ರವಿಶೇಖರ್, ಡೀನ್ರೆಕ್ಸ್, ಕೆ.ಇ. ಲಿಂಗರಾಜು ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ.